

ಬೆಂಗಳೂರು: ಒಕ್ಕಲಿಗ ನಾಯಕತ್ವದ ವಿರುದ್ಧ ರಾಜ್ಯದಲ್ಲಿ ಹಿಂದಿನಿಂದಲೂ ದೌರ್ಜನ್ಯ ರಾಜಕಾರಣ ಇದ್ದದ್ದೇ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಒಕ್ಕಲಿಗ ಅಸ್ಮಿತೆಯನ್ನು ರಾಜಕೀಯ ಅಸ್ತ್ರವಾಗಿ ಬಳಸಿಕೊಂಡಿದ್ದಾರೆ. ಇದು ಜಾಲತಾಣಗಳಲ್ಲಿ ಸಾಕಷ್ಟು ಟೀಕೆ-ಟಿಪ್ಪಣಿಗೂ ಒಳಗಾಗಿದೆ. ಒಕ್ಕಲಿಗರು ಹೋರಾಟಕ್ಕಿಳಿದರೆ, ಅಧಿಕಾರಕ್ಕೆ ಬಂದರೆ ಅವರನ್ನು ಬೆದರಿಸುವ, ಸರ್ಕಾರಗಳನ್ನು ಬೀಳಿಸುವ ಕಾಯಕ ಹಿಂದಿನಿಂದ ನಡೆದುಕೊಂಡು ಬಂದಿದೆ. ದೇವೇಗೌಡರಂಥವರ ಮೇಲೇ ಹಲ್ಲೆ ಪ್ರಯತ್ನಗಳು ನಡೆದಿವೆ. ಅವರಿಗೆ ಅಧಿಕಾರ ವಂಚಿಸಲು ಯತ್ನಿಸಿದ್ದನ್ನು ಸಮಾಜ ನೋಡಿದೆ. ಈಗ ಈ ಶಕ್ತಿಗಳು ನನ್ನ ವಿರುದ್ಧ ನಿಂತಿವೆ. ಇದಕ್ಕೆ ಬೆದರುವ ವ್ಯಕ್ತಿ ನಾನಲ್ಲ. ‘ಒಕ್ಕಲಿಗ ಒಕ್ಕದಿದ್ದರೆ ಬಿಕ್ಕುವುದು ಜಗತ್ತು’ ಎಂಬ ಕವಿವಾಣಿ ನೆನಪಿರಲಿ. ಅವರ ಪ್ರತಿನಿಧಿ ನಾನು. ರೈತರಿಗಾಗಿ ಕಾರ್ಯಕ್ರಮ ಹಮ್ಮಿಕೊಂಡವ ನಾನು. ನೀವು ನನ್ನನ್ನು ಕೊಲ್ಲಲಾದೀತೆ? ನನ್ನನ್ನು ಪಾಕಿಸ್ತಾನಿ ಎನ್ನುವಿರೆ? ಮುಂದೊಂದು ದಿನದ ಪ್ರಾಯಶ್ಚಿತ್ತ ಪಡಲೆಂದೇ ಇಂದು ನೀವು ಮಾಡಿಕೊಳ್ಳುತ್ತಿರುವ ಪಾಪಗಳಿವು’ ಎಂದು ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಸಮಾಜದ ಶಾಂತಿಗಾಗಿ ಹೋರಾಡಿದ್ದಕ್ಕೆ ನನ್ನನ್ನು ಕೊಲ್ಲುವ ಸಂಚು ನಡೆಯುತ್ತಿದೆಯಂತೆ. ನನ್ನನ್ನು ಕೊಲ್ಲಿಸುವ ಕೆಲಸಕ್ಕೆ ಕೈಹಾಕಿದವರೆ ಒಂದು ವಿಚಾರ ತಿಳಿದುಕೊಳ್ಳಿ. ನನ್ನಂತೆ ಹೋರಾಡಬಲ್ಲ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳ ಪಡೆ ನನ್ನ ಬೆನ್ನಿಗಿದೆ. ನನ್ನನ್ನು ಕೊಲ್ಲಬಹುದು. ಆದರೆ, ನನ್ನ ಬೆನ್ನಿಗೆ ನಿಂತವರನ್ನು ಕೊಲ್ಲಲಾದೀತೆ? ಎಂದು ಕೇಳಿದ್ದಾರೆ. ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ.. ನಿಮ್ಮ ಜೀನ್ಗಳು ಪಾಕಿಸ್ತಾನದಲ್ಲಿರಬಹುದು
ಅಥವಾ ಜರ್ಮನಿಯ ನಾಝಿಗಳಲ್ಲಿರಬಹುದು. ನನ್ನ ಜೀನ್ ಈ ಮಣ್ಣಿನಲ್ಲಿದೆ. ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು. ಅಪಮಾನಿಸಲು ಯತ್ನಿಸುತ್ತಿರುವವರು ಒಕ್ಕಲಿಗ ಅಸ್ಮಿತೆಯ ವಿರೋಧಿಗಳು ಎಂದು ಮತ್ತೊಂದು ಟ್ವೀಟ್ನಲ್ಲಿ ಆರೋಪಿಸಿದ್ದಾರೆ.
ಮಾಜಿ ಶಾಸಕ ಮಧು ಬಂಗಾರಪ್ಪ, ಮಾಜಿ ಎಂಎಲ್ಸಿ ರಮೇಶ್ ಬಾಬು ಜೆಡಿಎಸ್ ತೊರೆಯುವ ಬಗ್ಗೆ ಪ್ರತಿಕ್ರಿಯಿಸಿರುವ ಎಚ್ಡಿಕೆ, ಬರುವವರು ಬರುತ್ತಾರೆ. ಹೋಗುವವರು ಹೋಗುತ್ತಾರೆ. ಬಂದು ಹೋಗುವವರ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ನಾನು ಎಷ್ಟು ಬಾರಿ ಕರೆದು ಮಾತನಾಡಲಿ. ದೊಡ್ಡ ಪಕ್ಷಕ್ಕೆ ಸೇರಿ ಏನೋ ಸಾಧನೆ ಮಾಡುತ್ತೇನೆಂಬ ಭ್ರಮೆ ಇದೆ ಎಂದಿದ್ದಾರೆ.
ಆರ್ಎಸ್ಎಸ್, ಹಿಂದೂ ಸಂಘಟನೆಗಳಿಂದಲೇ ತಮಗೆ ಜೀವ ಬೆದರಿಕೆ ಕರೆಗಳು ಬರುತ್ತಿದ್ದು, ಇಂತಹ ಬೆದರಿಕೆಗಳಿಗೆ ಬಗ್ಗುವವನಲ್ಲ. ನನ್ನ ಮೇಲೆ ದೌರ್ಜನ್ಯ ನಡೆದರೆ ಭಸ್ಮ ಆಗುತ್ತಾರೆ. ನನ್ನ ಬೆದರಿಸಿ ಏನೂ ಮಾಡಲಾಗಲ್ಲ. | ಎಚ್.ಡಿ.ಕುಮಾರಸ್ವಾಮಿ ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆಗಳಿಗೆ ಯಾವುದೇ ಉತ್ತರ ಕೊಡಬಾರದು ಎಂದು ತೀರ್ವನಿಸಿದ್ದೇನೆ. ಹಾಗಾಗಿ ಈಗ ಯಾವುದಕ್ಕೂ ಉತ್ತರಿಸೋದಿಲ್ಲ. | ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಕುಮಾರಸ್ವಾಮಿ ನನ್ನ ಸ್ನೇಹಿತರು. ಮಾಜಿ ಸಿಎಂಗೆ ಏನು ಭದ್ರತೆ ಕೊಡಬೇಕೋ ಅದನ್ನು ಕೊಟ್ಟಿದ್ದೇವೆ. ಜೀವ ಬೆದರಿಕೆ ಬಗ್ಗೆ ವಿವರ ಕೊಟ್ಟರೆ ತನಿಖೆ ಮಾಡಿಸಲಾಗುವುದು. ಅವರ ರಕ್ಷಣೆ ನಮ್ಮ ಆದ್ಯತೆ. ಕೊಲೆ ಸಂಚಿನ ಅವರು ವಿವರ ಕೊಡಬೇಕು. | ಬಸವರಾಜ ಬೊಮ್ಮಾಯಿ ಗೃಹ ಸಚಿವರು