ಮಾಜಿ ಸಿಎಂ ಕುಮಾರಸ್ವಾಮಿಗೆ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿ

hdk
Published on

ಬೆಂಗಳೂರು: ಮಾಜಿ ಸಿಎಂ‌ ಕುಮಾರಸ್ವಾಮಿ ಅವರಿಗೆ ಇಂದು ಯಶಸ್ವಿಯಾಗಿ ಹೃದಯ ಶಸ್ತ್ರ ಚಿಕಿತ್ಸೆ  ನಡೆಸಲಾಗಿದೆ.

ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಎಚ್​ಡಿಕೆಗೆ ಚಿಕಿತ್ಸೆ ಮುಂದುವರೆದಿದ್ದು, ಮಾರ್ಚ್ 25ಕ್ಕೆ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಮಾಜಿ ಸಚಿವ ಸಿಎಸ್ ಪುಟ್ಟರಾಜು, ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಆಗಿದೆ.  ಯಾವುದೇ ತೊಂದರೆ ಇಲ್ಲದಂತೆ ಕುಮಾರಣ್ಣ ಗುಣಮುಖರಾಗಿದ್ದಾರೆ. ಇನ್ನ ಮೂರ್ನಾಲ್ಕು ದಿನಗಳಲ್ಲಿ ಕುಮಾರಣ್ಣ ವಾಪಸ್ ಆಗಲಿದ್ದಾರೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net