

ಗೋಣಿಕೊಪ್ಪಲು: ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನೀಡುವ ಜಿಲ್ಲೆಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ವಿರಾಜಪೇಟೆ ತಾಲೂಕು ದೇವಣಗೇರಿ ಬಿಸಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಎಚ್.ಡಿ.ಲೋಕೇಶ್ ಬಾಜನರಾಗಿದ್ದಾರೆ.
ಲೋಕೇಶ್ ಅವರು ಬಿ.ಸಿ.ಪ್ರೌಢಶಾಲೆ ದೇವಣಗೇರಿಯಲ್ಲಿ ಕಳೆದ 18 ವರ್ಷಗಳಿಂದ ಆಂಗ್ಲಭಾಷೆ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಕಳೆದ 13 ವರ್ಷಗಳಿಂದ ಮುಖ್ಯಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಉನ್ನತೀಕರಣಕ್ಕೆ ಶ್ರಮಿಸುತ್ತಿರುವ ಇವರು 10ನೇ ತರಗತಿ ಪರೀಕ್ಷೆ ಪಲಿತಾಂಶವನ್ನು ಸುತತ ಎಂಟು ವರ್ಷಗಳವರೆಗೆ ನಿರಂತರವಾಗಿ ಶೇ.100ರಷ್ಟು ನೀಡಿದ ಹೆಗ್ಗಳಿಕೆ ಇದೆ.
ಇವರೊಂದಿಗೆ, ವಿರಾಜಪೇಟೆ ತಾಲೂಕಿನ ಎಮ್ಮೆಗುಂಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಎ.ಕೆ.ಮಾಚಮ್ಮ, ಚೆನ್ನಂಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಕೆ.ಕೆ.ಸುಷಾ ಮತ್ತು ಮಡಿಕೇರಿ ತಾಲೂಕಿನ ಮೊಣಕಾಲ್ಕುರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶಾಲಿನಿ, ಅರೆಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಎ.ಡಿ.ಮೀನಾಕ್ಷಿ, ಹಾಕತ್ತೂರು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಎಂ.ವನಜಾ, ಸೋಮವಾರಪೇಟೆ ತಾಲೂಕಿನ ಬಡುಬನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಕೆ.ವಿ. ಜಾನ್ಸಿ, ಕೂಡಿಗೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಎಸ್.ಎ.ಯೋಗೇಶ್, ಕೊಡ್ಲಿಪೇಟೆ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಎಂ.ಎಸ್.ಅಬ್ದುಲ್ ರಬ್ ಪಡೆದುಕೊಂಡಿದ್ದಾರೆ.
ಸೆ.5ರಂದು ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.