

ಕೋಲಾರ: ಅಬಕಾರಿ ಸಚಿವ ಸ್ಥಾನಕ್ಕೆ ಎಚ್. ನಾಗೇಶ್ ರಾಜೀನಾಮೆ ಕೊಡುತ್ತಿದ್ದಂತೆ ಅವರ ಸ್ವಕ್ಷೇತ್ರದಲ್ಲೇ ಕೆಲವರು ಪಟಾಕಿ ಸಿಡಿಸಿ ತೆಂಗಿನ ಕಾಯಿ ಹೊಡೆಯುವ ಮೂಲಕ ಸಂಭ್ರಮಿಸಿದರು.
ಬಿಎಸ್ವೈ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೆಲವೇ ಕ್ಷಣಗಳು ಬಾಕಿ ಇರುವಾಗಲೇ ಮುಳಬಾಗಿಲು ಕ್ಷೇತ್ರದ ಶಾಸಕ ಎಚ್.ನಾಗೇಶ್ ಅವರಿಗೆ ಸಚಿವ ಸ್ಥಾನದಿಂದ ಕೆಳಗಿಳಿಸಲಾಯಿತು. ಅಬಕಾರಿ ಸಚಿವ ಸ್ಥಾನಕ್ಕೆ ನಾಗೇಶ್ ರಾಜೀನಾಮೆ ನೀಡುವ ವೇಳೆ ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಅವರ ಬೆಂಬಲಿಗರು ಕೋಲಾರ ಜಿಲ್ಲೆಯ ಮುಳಬಾಗಿಲು ಕ್ಷೇತ್ರದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.