

ಮೈಸೂರು: ಚುನಾವಣೆಗೆ ನಿಲ್ಲಬಾರದಿತ್ತು ಎಂದು ಹೇಳಲು ಶಾಸಕ ಡಾ. ಸುಧಾಕರ್ ಯಾರು ಎಂದು ಮಾಜಿ ಶಾಸಕ ಎಚ್. ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಸುಧಾಕರ್ ನನ್ನ ಸ್ಪರ್ಧೆ ಬಗ್ಗೆ ಮಾತನಾಡಲು ಅವರು ಯಾರು ಎಂದು ಪ್ರಶ್ನಿಸಿದರು.
ಚುನಾವಣೆಯಲ್ಲಿ ಸೋತಿರುವ ಲಕ್ಷ್ಮಣ್ ಸವದಿಗೆ ಸಚಿವ ಸ್ಥಾನ ನೀಡಲಾಗಿದೆ. ಹೀಗಿರುವಾಗ ನನಗೆ ಸಚಿವ ಸ್ಥಾನ ಬೇಕು ಎಂದು ಕೇಳುವುದರಲ್ಲಿ ತಪ್ಪು ಏನಿದೆ ಎಂದು ಪ್ರಶ್ನಿಸಿದರು.
ನಾನು ಯಡಿಯೂರಪ್ಪ ಅವರನ್ನು ಈಗಲೂ ನಂಬಿದ್ದೇನೆ. ಮಂತ್ರಿ ಸ್ಥಾನ ಸಿಗಲಿಲ್ಲ ಅಂದರೆ ಆಕಾಶ ಕಳಚಿ ಬೀಳುವುದಿಲ್ಲ. ನಾನು ಇಟ್ಟಿರುವ ಹೆಜ್ಜೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ಇಬ್ಬರಿಗೂ ಗೊತ್ತಿದೆ. ಸಮ್ಮಿಶ್ರ ಸರ್ಕಾರ ಕಿತ್ತೊಗೆಯಬೇಕು ಎಂಬ ಗುರಿಯಿಂದ ರಾಜೀನಾಮೆ ನೀಡಿದ್ದೆ. ಹೀಗಾಗಿ ನನ್ನ ಉದ್ದೇಶ ಈಡೇರಿದೆ. ಸಚಿವ ಸ್ಥಾನ ಸಿಗದಿದ್ದರೂ ಈ ವಿಶ್ವನಾಥ್ ಅಳುಕುವುದಿಲ್ಲ. ನನಗೆ ಯಾವುದೇ ರೀತಿ ಸೋಲಾಗಿಲ್ಲ ಎಂದು ರಾಜೀನಾಮೆ ನೀಡಿದ್ದನ್ನು ಸಮರ್ಥಿಸಿಕೊಂಡರು. (ದಿಗ್ವಿಜಯ ನ್ಯೂಸ್)