ರಾಜ್ಯದಲ್ಲಿ 41 ಎಚ್1ಎನ್1 ಪ್ರಕರಣಗಳು ದೃಢ

H1N1
Published on

ಬೆಂಗಳೂರು: ರಾಜ್ಯದಲ್ಲಿ ಸಾಂಕ್ರಾಮಿಕ ರೋಗಗಳ ಜೊತೆಗೆ ಎಚ್1ಎನ್1 ಪ್ರಕರಣಗಳು ಏರಿಕೆಯಾಗುತ್ತಿದ್ದು, ಈವರೆಗೂ 41 ಮಂದಿಯಲ್ಲಿ ಸೋಂಕು ದೃಢಪಟ್ಟಿವೆ.

ಜ್ವರದ ಶಂಕಿತರಲ್ಲಿ 2,721 ಮಂದಿಯ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಐದು ಜಿಲ್ಲೆಗಳಲ್ಲಿ ಎಚ್1ಎನ್1 ಪ್ರಕರಣಗಳು ಪತ್ತೆಯಾಗಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 26, ಬೆಂಗಳೂರು ನಗರ ಜಿಲ್ಲೆಯಲ್ಲಿ 9, ಉಡುಪಿಯಲ್ಲಿ 4, ಹಾಸನ ಹಾಗೂ ಮೈಸೂರಿನಲ್ಲಿ ತಲಾ ಒಂದು ಪ್ರಕರಣ ವರದಿಯಾಗಿದೆ. ಯಾವುದೇ ಸಾವು ಸಂಭವಿಸಿಲ್ಲ.

ಕಳೆದ ವರ್ಷ ರಾಜ್ಯದಲ್ಲಿ 3,339 ಶಂಕಿತರ ರಕ್ತದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಲ್ಲಿ 517 ಮಂದಿಯಲ್ಲಿ ಈ ಜ್ವರ ದೃಢಪಟ್ಟಿತ್ತು. 14 ಮಂದಿ ಜ್ವರದ ತೀವ್ರತೆಗೆ ಮೃತಪಟ್ಟಿದ್ದರು. 2019ರಲ್ಲಿ 2 ಸಾವಿರಕ್ಕೂ ಅಧಿಕ ಮಂದಿ ಈ ಜ್ವರದಿಂದ ಬಳಲಿದ್ದು, 96 ಮಂದಿ ಸಾವನ್ನಪ್ಪಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net