

ಬೆಂಗಳೂರು: ಸರ್ಕಾರಿ ಸ್ವಾಮ್ಯದ ರಾಜ್ಯ ಮಾರ್ಕೆಟಿಂಗ್, ಕಮ್ಯೂನಿಕೇಷನ್ ಮತ್ತು ಅಡ್ವರ್ಟೈಜಿಂಗ್ ಲಿಮಿಟೆಡ್ ಕಚೇರಿ ಸರ್ವರ್ ಹ್ಯಾಕ್ ಮಾಡಿ ಕ್ರಿಪ್ಟೋ ಕರೆನ್ಸಿಗೆ ಹ್ಯಾಕರ್ರ್ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ.
ಸಂಸ್ಥೆಯ ಅಧಿಕಾರಿ ಮಹಮ್ಮದ್ ಅತೀಕ್ ಉಲ್ಲಾ ಶರೀಷ್ ಈ ಸಂಬಂಧ ಕೇಂದ್ರ ಸಿಇಎನ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಂಪನಿಗೆ ಸೇರಿದ ವ್ಯವಹಾರಗಳನ್ನು ಗಣಕೀಕೃತವಾಗಿ ನಿರ್ವಹಿಸುತ್ತಿದ್ದು, ಹಣಕಾಸು ಮತ್ತು ಲೆಕ್ಕಪತ್ರಗಳ ದಾಖಲೆಗಳನ್ನು ಸರ್ವರ್‌ನಲ್ಲಿ ಸಂಗ್ರಹಿಸಲಾಗಿದೆ. 7ರಂದು ಕಚೇರಿ ಸರ್ವರ್ ಹ್ಯಾಕ್ ಮಾಡಿರುವ ಅಪರಿಚಿತ ವ್ಯಕ್ತಿ, ಡೇಟಾ ಕಳ್ಳತನವಾಗಿದೆ. ನಿಮಗೆ ವಾಪಸ್ ಬೇಕಾದರೆ ಕ್ರಿಪ್ಟೋ ಕರೆನ್ಸಿ ಮೂಲಕ ಹಣ ಸಂದಾಯ ಮಾಡುವಂತೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾನೆ.
ಆರೋಪಿಯನ್ನು ಪತ್ತೆಹಚ್ಚಿ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಸೈಬರ್ ಪೊಲೀಸರು ಮಾಹಿತಿ ನೀಡಿದ್ದಾರೆ.