ಹಲಾಲ್ ಬಜೆಟ್ ಟೀಕೆ; ಬಿಜೆಪಿಯವರ ಕೊಳಕು ಮನಸ್ಥಿತಿ ಎಂದ CM ಸಿದ್ದರಾಮಯ್ಯ

dk - 2025-03-07T201943.784
Published on

ಬೆಂಗಳೂರು:ಅಲ್ಪಸಂಖ್ಯಾತರು, ಪ.ಜಾ, ಪ.ವರ್ಗ, ಹಿಂ.ವರ್ಗಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಬೌದ್ಧರು, ಜೈನ್, ಕ್ರಿಶ್ಚಿಯನ್ ಸೇರಿದಂತೆ ಅಲ್ಪಸಂಖ್ಯಾತರ ಎಲ್ಲ ಸಮುದಾಯದವರಿಗೆ 4 ಸಾವಿರ ಕೋಟಿ ಕೊಟ್ಟರೂ, ಇದನ್ನು ಹಲಾಲ್ ಬಜೆಟ್ ಎಂದು ಟೀಕಿಸುತ್ತಾರೆ. ಇದು ಬಿಜೆಪಿಯವರ ಕೊಳಕು ಮನಸ್ಥಿತಿಯನ್ನು ಬಿಂಬಿಸುತ್ತದೆ ಎಂದು CM ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಬಜೆಟ್​ ಬಳಿಕ ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಗ್ಯಾರಂಟಿಗಳನ್ನು ಮದ್ಯವರ್ತಿಗಳ ಹಾವಳಿ ಇಲ್ಲದೇ ನೇರವಾಗಿ ಫಲಾನುಭವಿಗಳಿಗೆ ಡಿಬಿಟಿ ಮಾಡಲಾಗುತ್ತಿದ್ದು, ಸಾರ್ವತ್ರಿಕ ಮೂಲ ಆದಾಯ ತತ್ವದ ಆಧಾರದ ಮೇಲೆ ರೂಪಿಸಲಾಗಿದೆ. ಗ್ಯಾರಂಟಿ ಯೋಜನೆಗಳಿಂದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಸುಮಾರು 232 ಕೋಟಿಗಳು ವೆಚ್ಚವಾಗುತ್ತಿದೆ. ಜನರಿಗೆ ಆರ್ಥಿಕ ಬಲ ತುಂಬಿದರೆ, ಅವರ ಖರೀದಿ ಶಕ್ತಿಯೂ ಹೆಚ್ಚಿ, ರಾಜ್ಯದ ಆರ್ಥಿಕತೆಯೂ ಬೆಳೆಯುತ್ತದೆ ಎಂದರು.

ಬಿಜೆಪಿಯವರಿಗೆ ದಿವಾಳಿ ಪದದ ಅರ್ಥ ಗೊತ್ತೇ?

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆರ್ಥಿಕ ಹೊಣಗಾರಿಕೆ ಅಧಿನಿಯಮದ ಬಗ್ಗೆ ತಿಳಿಯದೇ, ನಮ್ಮ ಆಯವ್ಯಯದ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರದ ವಿತ್ತೀಯ ಕೊರತೆ ಶೇ. 4.61 ರಷ್ಟಿದೆ. ಆದರೆ ರಾಜ್ಯದ ವಿತ್ತೀಯ ಕೊರತೆ ಶೇ.2.95 ರಷ್ಟಿದೆ. ಕೇಂದ್ರಸರ್ಕಾರದ ಬಜೆಟ್ 50 ಲಕ್ಷ ಕೋಟಿಯಲ್ಲಿ 15.66 ಲಕ್ಷ ಕೋಟಿ ಸಾಲ ಪಡೆದಿದ್ದು( ಶೇ.56 ಸಾಲ), ರಾಜ್ಯ 2.95 ರಷ್ಟು ಸಾಲ ಪಡೆದಿದ್ದೇವೆ. ಅಶೋಕ್ ರವರು ರಾಜಕೀಯಕ್ಕಾಗಿ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಟೀಕೆ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ದಿವಾಳಿ ಪದದ ಅರ್ಥ ಗೊತ್ತೇ? ರಾಜ್ಯಸರ್ಕಾರ ಆರ್ಥಿಕವಾಗಿ ಸದೃಢವಾಗಿದ್ದು, ಆರ್ಥಿಕ ಶಿಸ್ತನ್ನು ಪಾಲಿಸಲಾಗುತ್ತಿದೆ. ವಿತ್ತೀಯ ಹೊಣೆಗಾರಿಕೆ ಕಾಯ್ದೆಯ ಮಾನದಂಡಗಳನ್ನು ಪಾಲಿಸಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net