ಹಾಲಟ್ಟಿ ಕೆರೆ ಪ್ರವಾಸಿ ತಾಣವಾಗಿಸಲು ಸಂಕಲ್ಪ

27..5
ಚಿಕ್ಕೋಡಿ ಪಟ್ಟಣದ ಹಾಲಟ್ಟಿ ಕೆರೆ ವಿಶೇಷ ಸ್ವಚ್ಛತಾ ಅಭಿಯಾನದಲ್ಲಿ ಶಾಸಕ ಗಣೇಶ ಹುಕ್ಕೇರಿ ಮಾತನಾಡಿದರು. ಮಾಧವ ಗಿತ್ತೆ, ಸಿ.ಎಸ್.ಕುಲಕರ್ಣಿ, ಮಹಾಂತೇಶ ಎನ್., ರಾಮಾ ಮಾನೆ ಇತರರಿದ್ದರು.
Published on

ಚಿಕ್ಕೋಡಿ: ಪಟ್ಟಣದ ಹಾಲಟ್ಟಿ ಕೆರೆಗೆ ಮೂಲಸೌಕರ್ಯ ಕಲ್ಪಿಸುವ ಮೂಲಕ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ಗಣೇಶ ಹುಕ್ಕೇರಿ ಹೇಳಿದರು.

ಪಟ್ಟಣದ ಪುರಸಭೆ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಪಟ್ಟಣದ ಹಾಲಟ್ಟಿ ಕೆರೆಯ ವಿಶೇಷ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ಎಂಎಲ್ಸಿ ಪ್ರಕಾಶ ಹುಕ್ಕೇರಿ ಹಾಗೂ ನನ್ನ ಪ್ರಯತ್ನದಿಂದ 10 ಕೋಟಿ ರೂ. ವೆಚ್ಚದಲ್ಲಿ ಕೃಷ್ಣಾ ನದಿಯಿಂದ ಪೈಪ್‌ಲೈನ್ ಮೂಲಕ ಕೆರೆಗೆ ನೀರು ಸರಬರಾಜು ಮಾಡಲು ಸೌಕರ್ಯ ಕಲ್ಪಿಸಲಾಗಿದೆ ಎಂದರು.

ಕೆರೆ ವಾಯುವಿಹಾರಕ್ಕೆ ಅನುಕೂಲವಾಗುವಂತೆ ವಿಶೇಷ ಅನುದಾನ ತಂದು ವಾಕಿಂಗ್ ಟ್ರ್ಯಾಕ್, ಮಕ್ಕಳಿಗಾಗಿ ಬೋಟಿಂಗ್ ವ್ಯವಸ್ಥೆ, ಹಿರಿಯರಿಗಾಗಿ ಆಸನಗಳ ವ್ಯವಸ್ಥೆ ಜತೆಗೆ ಇತರ ಸೌಕರ್ಯ ಕಲ್ಪಿಸಲಾಗುವುದು ಎಂದರು.

ಉಪವಿಭಾಗಾಕಾರಿ ಮಾಧವ ಗಿತ್ತೆ ಮಾತನಾಡಿ, ಪುರಸಭೆ ಸಿಬ್ಬಂದಿ ಸಹಕಾರದೊಂದಿಗೆ ಕೆರೆ ಸ್ವಚ್ಛತಾ ಕಾರ್ಯ ತಿಂಗಳಿಂದ ನಡೆಯುತ್ತಿದೆ. ಸಾರ್ವಜನಿಕರು ಸ್ವಚ್ಛತೆ ಕಾಪಾಡಿ ನಾಗರಿಕ ಜವಾಬ್ದಾರಿ ಮೆರೆಯಬೇಕು ಎಂದರು.

ತಹಸೀಲ್ದಾರ್ ಸಿ.ಎಸ್.ಕುಲಕರ್ಣಿ, ಪುರಸಭೆ ಮುಖ್ಯಾಕಾರಿ ಮಹಾಂತೇಶ ಎನ್., ಪುರಸಭೆ ಸದಸ್ಯರಾದ ರಾಮಾ ಮಾನೆ, ಗುಲಾಬ್ ಹುಸೇನ್, ಪ್ರಭಾಕರ ಕೋರೆ, ರವಿ ಮಾಳಿ, ಬಾಬು ಸಮತಶೆಟ್ಟಿ, ಮಲ್ಲೇಶ ಲಿಂಬಿಗಿಡದ, ರೋಟರಿ ಕ್ಲಬ್ ಸದಸ್ಯರಾದ ರಾಜ ಜಾಧವ, ಪುರಸಭೆ ಸಿಬ್ಬಂದಿ, ಪೌರಕಾರ್ಮಿಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net