ಯೋಗ ದಿನಕ್ಕೆ ಶಾಲೆಗಳಲ್ಲಿ ಅರ್ಧ ದಿನ ರಜೆ: ಸರ್ಕಾರ ವಿಧಿಸಿದ ಷರತ್ತು ಏನು?

yoga
Published on

ಬೆಂಗಳೂರು ರಾಜ್ಯದ ಎಲ್ಲ ಶಾಲೆಗಳಲ್ಲಿ ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಬೇಕು ಮತ್ತು ಶನಿವಾರ (ಜೂ.22) ಪೂರ್ಣ ತರಗತಿಗಳನ್ನು ನಡೆಸುವಂತೆ ಶಾಲಾ ಶಿಕ್ಷಣ ಇಲಾಖೆಯು ನಿರ್ದೇಶನ ನೀಡಿದೆ.

ಶಾಲೆಯಲ್ಲಿ ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಎಸ್‌ಡಿಎಂಸಿ ಸದಸ್ಯರು, ಪಾಲಕರು, ಶಾಲೆಯ ಎಲ್ಲ ಶಿಕ್ಷಕರು ಮತ್ತು ಸ್ಥಳೀಯ ಯೋಗ ಸಂಸ್ಥೆಗಳ ಯೋಗಪಟುಗಳ ಸಹಕಾರದಿಂದ ಆಚರಿಸಲು ತಿಳಿಸಲಾಗಿದೆ.

ಶುಕ್ರವಾರ ಬೆಳಗ್ಗೆ 7.30ರಿಂದ 11.30ರವರೆಗೆ ಎಲ್ಲ ಶಾಲೆಗಳಲ್ಲಿ ಕಡ್ಡಾಯವಾಗಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಶುಕ್ರವಾರದ ಬದಲಾಗಿ ಶನಿವಾರ ಪೂರ್ಣ ತರಗತಿಗಳನ್ನು ನಡೆಸುವಂತೆ ಶಾಲೆಗಳ ಮುಖ್ಯ ಶಿಕ್ಷಕರಿಗೆ ನಿರ್ದೇಶನ ನೀಡುವಂತೆ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಉಪ ನಿರ್ದೇಶಕರಿಗೆ ಶಾಲಾ ಶಿಕ್ಷಣ ಆಯುಕ್ತರು ಸುಚನೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net