

ಬೆಂಗಳೂರು: ಬಿಗ್ ಬಾಸ್ ಸ್ವರ್ಧಿ ವರ್ತೂರ್ ಹಳ್ಳಿಕಾರ್ ಒಡೆಯ ಎಂದು ಕರೆಸಿಕೊಳ್ತಿರೋದು, ಬಿಂಬಿಸಿಕೊಳ್ತಿರುವುದು ಸರಿಯಲ್ಲ ಎಂದು ವರ್ತೂರ್ ವಿರುದ್ಧ ಕಾನೂನು ಹೋರಾಟಕ್ಕೆ ಹಳ್ಳಿಕಾರ್ ಸಂರಕ್ಷಕರು ಮುಂದಾಗಿದ್ದಾರೆ.
ಹಳ್ಳಿಕಾರ್ ಒಡೆಯ ಎಂದು ಕರೆಸಿಕೊಳ್ತಿರೋದು, ಬಿಂಬಿಸಿಕೊಳ್ತಿರುವುದು ಸರಿಯಲ್ಲ. ಇದು ಹಳ್ಳಿಕಾರ್ ಜನಾಂಗಕ್ಕೆ ಅಪಮಾನವಾಗಿದೆ ಎಂದು ವರ್ತೂರ್ ಸಂತೋಷ್ ವಿರುದ್ಧ ಕಾನೂನು ಹೋರಾಟ ನಡೆಸಲು ಹಳ್ಳಿಕಾರ್ ಸಂರಕ್ಷಕರು ಮುಂದಾಗಿದ್ದಾರೆ.
ಗೂಗಲ್ ನಲ್ಲಿಯೂ ಛೇರ್ ಮೇನ್ ಆಫ್ ಆಲ್ ಇಂಡಿಯಾ ಹಳ್ಳಿಕಾರ್ ಕನ್ಸರ್ವೇಶನ್ ಎಂದು ರಾಂಗ್ ಮೆಸೇಜ್ ನೀಡಿದ್ದಾರೆ. ಇದರಿಂದ ಮುಂದಿನ ಪೀಳಿಗೆಗೆ ತಪ್ಪು ಸಂದೇಶ ಹೋಗುತ್ತೆ. ವರ್ತೂರ್ ಸಂತೋಷನಿಂದಲೇ ಹಳ್ಳಿಕಾರ್ ತಳಿ ಹುಟ್ಟಿತು ಎಂದು ಬಿಂಬಿತವಾಗಬಹುದು. ಆದ್ದರಿಂದ ಕಾನೂನಾತ್ಮಕವಾಗಿ ಹೋರಾಟ ಮಾಡ್ತೇನೆ. ಎಲ್ಲಾ ದಾಖಲಾತಿಗಳನ್ನ ಸಂಗ್ರಹಿಸುತ್ತಿದ್ದು ಶೀಘ್ರ ಕಾನೂನು ಸಮರ ಸಾರುತ್ತೇವೆ. ಗೂಗಲ್ ವಿರುದ್ದ ಕಾನೂನು ಹೋರಾಟ ಮಾಡ್ತೇವೆ ಎಂದು ಹಳ್ಳಿಕಾರ್ ಸಂರಕ್ಷಕ ರವಿ ಪಟೇಲ್ ಎಚ್ಚರಿಕೆ ನೀಡಿದ್ದಾರೆ.