ಹಂಸಲೇಖಗೆ ಎದೆನೋವು; ಆಸ್ಪತ್ರೆಗೆ ದಾಖಲು

WhatsApp Image 2022-10-10 at 2.09.02 PM
Published on

ಬೆಂಗಳೂರು: ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖ್ಯಾತ ಚಲನಚಿತ್ರ ಸಂಗೀತ ನಿರ್ದೇಶಕ ಹಂಸಲೇಖ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅದರೆ ಹಂಸಲೇಖ ಅವರಿಗೆ ಏನೂ ಹೆಚ್ಚಿನ ತೊಂದರೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ.

ಗ್ಯಾಸ್ಟ್ರಿಕ್ ಸಮಸ್ಯೆಯಿಂದಾಗಿ ಹಂಸಲೇಖ ಅವರಿಗೆ ಎದೆನೋವು ಕಾಣಿಸಿಕೊಂಡಿತು ಎನ್ನಲಾಗಿದೆ. ಹಂಸಲೇಖ ಈ ಹಿಂದೆಯೇ ಓಪನ್ ಹಾರ್ಟ್ ಸರ್ಜರಿ ಮಾಡಿಸಿ ಕೊಂಡಿದ್ದಾರೆ.

ಸದ್ಯ ರಾಜಾಜಿನಗರದ ಫಸ್ಟ್ ಬ್ಲಾಕ್‌ನಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಹಂಸಲೇಖ ಇದ್ದಾರೆ. ಜನರಲ್ ವಾರ್ಡ್‌ನಲ್ಲೇ ಒಂದು ದಿನ ರೆಸ್ಟ್ ಮಾಡುವಂತೆ ವೈದ್ಯರು ಸಲಹೆ ಕೊಟ್ಟಿದ್ದಾರೆ. ವೈದ್ಯರ ಸಲಹೆ ಮೇರೆಗೆ ಒಂದು ದಿನದ ಮಟ್ಟಿಗೆ ಹಂಸಲೇಖ ಆಸ್ಪತ್ರೆಯಲ್ಲಿ ಉಳಿಯಲಿದ್ದಾರೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net