ಯಾರಾದರೂ ಸಿಎಂ ಆಗಲಿ ನಮಗೆ ಅಭ್ಯಂತರವಿಲ್ಲ; ಲಕ್ಷ್ಮೀ ಹೆಬ್ಬಾಳ್ಕರ್

MinisterMadamPhoto
Published on

ಹಾನಗಲ್ಲ: ರಾಜ್ಯದಲ್ಲಿ ಯಾರೇ ಸಿಎಂ ಆದರೂ ನಾವು ಕೆಲಸ ಮಾಡುತ್ತೇವೆ. ಯಾರಾದರೂ ಸಿಎಂ ಆದರೂ ನಮಗೆ ಅಭ್ಯಂತರವಿಲ್ಲ. ಹೈಕಮಾಂಡ್ ತೀರ್ಮಾನ ಏನಿದೆಯೋ ಅದಕ್ಕೆ ನಾವು 136 ಜನ ಶಾಸಕರು ಬದ್ಧರಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ತಾಲೂಕಿನ ಸಾಂವಸಗಿ ಗ್ರಾಮದಲ್ಲಿ ಭಾನುವಾರ ಮಾಧ್ಯಮದವರ ಎದುರು, ಸಿಎಂ ಖುರ್ಚಿ ಬಗ್ಗೆ ವೀರಪ್ಪ ಮೊಯ್ಲಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಈ ವಿಚಾರ ಹೈಕಮಾಂಡ್‌ಗೆ ಬಿಟ್ಟ ವಿಚಾರವಾಗಿದೆ. ನಾವು ಹೈಕಮಾಂಡ್ ಹೇಳಿದಂತೆ ನಡೆಯುತ್ತೇವೆ. ಸಿಎಂ ಯಾರಾದರೂ ನಾವು ಕೆಲಸ ಮಾಡುತ್ತೇವೆ ಎಂದರು.
ಯಾರೇ ಆಗಲಿ ಮಾಧ್ಯಮಗಳಿಗೆ ಹೇಳಿಕೆ ಕೊಡುವುದರ ಬಗ್ಗೆ ತಿಳಿದುಕೊಂಡು ಮಾತನಾಡಬೇಕು. ನಮ್ಮ ಅಧ್ಯಕ್ಷರ ಅಪ್ಪಣೆ ಏನಿದೆ ಅದನ್ನು ಚಾಚೂ ತಪ್ಪದೆ ನಿರ್ವಹಿಸಬೇಕು. ಈ ವಿಚಾರದಲ್ಲಿ ಜಾಸ್ತಿ ಮಾತನಾಡದೆ ಅಧ್ಯಕ್ಷರ ಅಪ್ಪಣೆಯಂತೆ ನಡೆದುಕೊಳ್ಳುತ್ತೇವೆ ಎಂದರು.
ಹುಲಿ ಉಗುರಿನ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಆರೋಪ ಕುರಿತು ಪ್ರತಿಕ್ರಿಯಿಸಿದ ಅವರು, ಇದರಲ್ಲಿ ಮಾಡುವುದು ಏನಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net