

ಬೆಂಗಳೂರು: ಪ್ರಶಾಂತ್ ವರ್ಮಾ ಆಕ್ಷನ್ ಕಟ್ ಹೇಳಿರುವ ತೇಜ ಸಜ್ಜ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಹನು-ಮಾನ್’ ಟೀಸರ್ ಬಿಡುಗಡೆಯಾಗಿದ್ದು, ಪ್ರೈಮ್ ಶೋ ಎಂಟಟೈನ್ಮೆಂಟ್ ಬ್ಯಾನರ್ ನಿರ್ಮಾಣದಲ್ಲಿ ಮೂಡಿಬಂದಿರುವ ಬಿಗ್ ಬಜೆಟ್ ಪ್ಯಾನ್ ಇಂಡಿಯಾ ಸಿನಿಮಾ ಇದಾಗಿದೆ. ಟ್ರೇಲರ್ ಝಲಕ್ ಮೂಲಕ ಪ್ರೇಕ್ಷಕರೆದುರು ಸೂಪರ್ ಹೀರೋ 'ಹನು-ಮಾನ್' ಎಂಟ್ರಿ ಕೊಟ್ಟಿದ್ದಾರೆ.
ನಿರ್ದೇಶಕ ಪ್ರಶಾಂತ್ ವರ್ಮಾ ಭಾರತದ ಮೊದಲ ಸೂಪರ್ ಹೀರೋ ‘ಹನು-ಮಾನ್’ ಬಗ್ಗೆ ಕಥೆ ಹೆಣೆದು ಪ್ಯಾನ್ ಇಂಡಿಯಾ ನಿರ್ದೇಶಕನಾಗಿ ಹೊರಹೊಮ್ಮುತ್ತಿದ್ದಾರೆ. ಚಿತ್ರದಲ್ಲಿ ನಾಯಕ ನಟನಾಗಿ ತೇಜ ಸಜ್ಜ ನಟಿಸುತ್ತಿದ್ದು, ಚಿತ್ರಕ್ಕಾಗಿ ಭರ್ಜರಿ ತಯಾರಿ ನಡೆಸಿರೋದು ಟ್ರೇಲರ್ನಲ್ಲಿ ಕಾಣಿಸುತ್ತದೆ. ಚಿತ್ರದಲ್ಲಿ ನಾಯಕಿಯಾಗಿ ಅಮೃತಾ ಐಯ್ಯರ್ ನಟಿಸಿದ್ದು, ಟ್ರೇಲರ್ ಸಖತ್ ಪ್ರಾಮಿಸಿಂಗ್ ಆಗಿದೆ.
ಯಥೋ ಧರ್ಮ ತತೋ ಹನುಮಾ... ಯಥೋ ಹನುಮ ತತೋ ಜಯ... (ಎಲ್ಲಿ ಸದಾಚಾರವಿದೆಯೋ ಅಲ್ಲಿ ಹನುಮಂತನು, ಮತ್ತು ಎಲ್ಲಿ ಹನುಮಂತ ಇದ್ದಾನೋ ಅಲ್ಲಿ ಜಯವಿದೆ ಎಂಬ ಡೈಲಾಗ್ ಮೂಲಕ ಹನುಮಾನ್ ಪ್ರಪಂಚನ್ನು ಪರಿಚಯಿಸಲಾಗಿದೆ. ಚಿತ್ರದಲ್ಲಿ ವರಲಕ್ಷಿ ಶರತ್ ಕುಮಾರ್, ವಿನಯ್ ರೈ, ರಾಜ್ ದೀಪಕ್ ಶೆಟ್ಟಿ, ಗೆಟಪ್ ಶ್ರೀನು, ಸತ್ಯ ಸೇರಿದಂತೆ ಮುಂತಾದವರ ತಾರಾಗಣವಿದೆ.
ಪ್ಯಾನ್ ಇಂಡಿಯಾ ಹನುಮಾನ್ ಸಿನಿಮಾ, ಭಾರತೀಯ ವಿವಿಧ ಭಾಷೆಗಳಾದ ತೆಲುಗು, ಕನ್ನಡ, ಮರಾಠಿ, ತಮಿಳು, ಮಲಯಾಳಂ, ಇಂಗ್ಲೀಷ್, ಸ್ಯಾನೀಶ್, ಚೈನೀಸ್, ಜಪಾನೀಸ್ ಮತ್ತು ಕೊರಿಯನ್ ಭಾಷೆಯಲ್ಲಿ ಬಿಡುಗಡೆಯಾಗಲಿದೆ. ಚಿತ್ರವು ಸಂಕ್ರಾಂತಿ ಹಬ್ಬಕ್ಕೆ ಜಾಗತಿಕವಾಗಿ ರಿಲೀಸ್ ಆಗಲು ಸಜ್ಜಾಗಿದೆ.