ಹನುಮ ಜಯಂತಿ ವಿಶೇಷ ಪೂಜೆ

13BTP01
ಬೆಟ್ಟದಪುರ ಸಮೀಪದ ಸೂಳೆಕೋಟೆ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಹೊರನೋಟ.
Published on

ಬೆಟ್ಟದಪುರ: ಸಮೀಪದ ಸೂಳೆಕೋಟೆ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ಹನುಮ ಜಯಂತಿ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಶ್ರೀಸೀತಾರಾಮ ಸಮೇತ ಶ್ರೀ ಆಂಜನೇಯ ದೇವರ ಉತ್ಸವ ಮೂರ್ತಿಗಳಿಗೆ ವಿಶೇಷವಾಗಿ ಅಲಂಕಾರ ಮಾಡಿ, ದೇವಸ್ಥಾನದ ಆವರಣದಲ್ಲಿ ಮೆರವಣಿಗೆ ಮಾಡಲಾಯಿತು. ದೇವಸ್ಥಾನಕ್ಕೆ ಆಗಮಿಸಿದ ಸುತ್ತಮುತ್ತಲಿನ ಭಕ್ತರು ಪೂಜೆ ಸಲ್ಲಿಸಿ ಇಷ್ಟಾರ್ಥ ಸಿದ್ಧಿಗಾಗಿ ಬೇಡಿಕೊಂಡರು. ಬಳಿಕ ಪ್ರಸಾದ ವಿತರಣೆ ಮಾಡಲಾಯಿತು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net