ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ

IMG-20230716-WA0082
Published on

ಹನೂರು:ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಒದಗಿಸುವುದರ  ಜತೆಗೆ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶಾಸಕ ಎಂ. ಆರ್. ಮಂಜುನಾಥ್ ತಿಳಿಸಿದರು.

ಪಟ್ಟಣದ ಲೋಕೋಪಯೋಗಿ ಅತಿಥಿ ಗೃಹದ ಸಭಾಂಗಣದಲ್ಲಿ ಭಾನುವಾರ ಕೊಳ್ಳೇಗಾಲ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಮಂಜುಳಾ ಅವರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.ಶಿಕ್ಷಣ ಮಕ್ಕಳ ಭವಿಷ್ಯವನ್ನು ರೂಪಿಸುವ ಅಡಿಗಲ್ಲು. ಹಾಗಾಗಿ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ. ಈ ದಿಸೆಯಲ್ಲಿ  ಶಾಲೆಯಲ್ಲಿ ಮಕ್ಕಳ ಕಲಿಕೆಗೆ ಪೂರಕವಾದ ವಾತಾವರಣ ನಿರ್ಮಿಸಬೇಕು. ಬೋಧನಾ - ಕಲಿಕಾ ವೇಳೆ ವಿದ್ಯಾರ್ಥಿಗಳಲ್ಲಿ ಚಿಂತನಾ ಸಾಮರ್ಥ್ಯವನ್ನು ಹೆಚ್ಚಿಸಬೇಕು. ಪಠ್ಯದ ಜೊತೆ ಸಹಪಠ್ಯ ಚಟುವಟಿಕೆಗಳಿಗೂ ಅವಕಾಶ ಒದಗಿಸಬೇಕು. ಮಕ್ಕಳ ಶೈಕ್ಷಣಿಕ ಸಾಧನೆಗೆ ಶಿಕ್ಷಕರು ಅಗತ್ಯ ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸಬೇಕು. ಆದ್ದರಿಂದ ಈ ಬಗ್ಗೆ ಅಗತ್ಯ ಕ್ರಮ ವಹಿಸುವುದರ ಮೂಲಕ ಶಾಲೆಗಳ ಉತ್ತಮ ಫಲಿತಾಂಶಕ್ಕೆ  ಶ್ರಮಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಕ ಮಹಾದೇವ, ಪಿಡಬ್ಲ್ಯುಡಿ ಸುರೇಂದ್ರ ಹಾಗೂ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net