ಮಂಗಳೂರಿನಲ್ಲಿ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್, ನಟ ಸುನೀಲ್‌ ಶೆಟ್ಟಿ; ಹುಲಿವೇಷ ಕುಣಿತ ಸ್ಪರ್ಧೆಗೆ ತಾರಾ ಮೆರುಗು

sunil shetty
Published on

ಮಂಗಳೂರು: ದಸರಾ ಪ್ರಯುಕ್ತ ಕಾಂಗ್ರೆಸ್ ಮುಖಂಡ ಮಿಥುನ್ ರೈ ನೇತೃತ್ವದಲ್ಲಿ‌ ಉರ್ವಾ ಮೈದಾನದಲ್ಲಿ ನಡೆದ ಪಿಲಿನಲಿಕೆಯಲ್ಲಿ ಭಾರತ ತಂಡದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಮತ್ತು ಬಾಲಿವುಡ್ ನಟ ಸುನೀಲ್ ಶೆಟ್ಟಿ ಭಾಗಿಯಾಗಿದ್ದಾರೆ. ಈ ಕುರಿತಾದ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್​​​ ಮೀಡಿಯಾದಲ್ಲಿ ವೈರಲ್​​ ಆಗಿವೆ.

ಹುಲಿವೇಷವನ್ನು ಕಂಡು ಸಂಭ್ರಮಪಟ್ಟ ಹರ್ಭಜನ್ ಸಿಂಗ್ ಹುಲಿ ಕುಣಿತವನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕವಾಗಿ ಪ್ರೇಕ್ಷಕರಲ್ಲಿ ಉತ್ಸಾಹ ತುಂಬಿದ್ದಾರೆ. 10 ತಂಡಗಳು ಹುಲಿ ಕುಣಿತ ಪ್ರದರ್ಶಿಸಿದ್ದಾರೆ.

ಹರ್ಭಜನ್ ಸಿಂಗ್ ಮಾತನಾಡಿ, ನನಗೆ ಬಹಳಷ್ಟು ಪ್ರೀತಿ ಕೊಟ್ಟಿದ್ದೀರಿ. ಈ ಪ್ರೀತಿಗೆ ನಾನೇನು ಹೇಳಬೇಕೆಂದು ಗೊತ್ತಿಲ್ಲ ಎಂದು ನೆರೆದಿರುವ ಪ್ರೇಕ್ಷಕರಿಗೆ ಸಾಷ್ಟಾಂಗ ಪ್ರಣಾಮ ಮಾಡಿದರು. ವಿಭಿನ್ನ ಸಂಸ್ಕೃತಿಯನ್ನು ನೋಡಿ ಖುಷಿಯಾಗಿದೆ. ಹುಲಿವೇಷಧಾರಿಗಳ ಎನೆರ್ಜಿ ನೋಡಿ ಒಂದು ಸಲ ನಾನೇ ದಂಗಾದೆ. ಇಷ್ಟೊಂದು ಎನೆರ್ಜಿ ಇದ್ದಲ್ಲಿ ಭಾರತ ಇಪ್ಪತ್ತು ವರ್ಷಗಳ ಕಾಲ ಕ್ರಿಕೆಟ್ ಪಂದ್ಯದಲ್ಲಿ ಗೆಲುವು ಸಾಧಿಸುವುದು ಖಂಡಿತಾ. ವರ್ಲ್ಡ್ ಕಪ್ ಕ್ರಿಕೆಟ್ ನಲ್ಲಿ ಈ ಬಾರಿ ಭಾರತಕ್ಕೆ ಗೆಲುವು ಸಿಗಲಿ ಎಂದು ಎಲ್ಲರೂ ಪ್ರಾರ್ಥನೆ ಮಾಡಿ ಎಂದು ಹೇಳಿದರು.

ನಟ ಸುನಿಲ್ ಶೆಟ್ಟಿ ಮಾತನಾಡಿ, ಹರ್ಭಜನ್ ಸಿಂಗ್ ಇದೇ ಮೊದಲ ಬಾರಿಗೆ ಮಂಗಳೂರಿಗೆ ಬಂದಿದ್ದಾರೆ‌. ಅವರು ಇಲ್ಲಿಯ ಆಹಾರವನ್ನು ಮೆಚ್ಚಿದ್ದಾರೆ. ಪಿಲಿನಲಿಕೆಯಲ್ಲಿ ಕುಣಿದ ಹುಲಿವೇಷಧಾರಿಗಳ ಆ್ಯಕ್ಷನ್ ನೋಡಿ ನನ್ನ ಮೂವತ್ತು ವರ್ಷದ ಆ್ಯಕ್ಷನ್ ಕೊಚ್ಕೊಂಡು ಹೋಗಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net