ಶಾಸಕ ಬಿ.ಪಿ. ಹರೀಶ ವಿರುದ್ಧ ದೂರು ದಾಖಲು

8-RNR-05
Published on

ರಾಣೆಬೆನ್ನೂರ: ದಾವಣಗೆರೆ ಎಸ್ಪಿ ಉಮಾ ಪ್ರಶಾಂತ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಹರಿಹರ ಶಾಸಕ ಬಿ.ಪಿ. ಹರೀಶ ವಿರುದ್ಧ ಇಲ್ಲಿಯ ಶಹರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರೈತ ಸಂದ ತಾಲೂಕು ಅಧ್ಯಕ್ಷ ಹನುಮಂತಪ್ಪ ಕಬ್ಬಾರ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಾಸಕ ಹರೀಶ ಎಸ್ಪಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಐಎಎಸ್​ ಅಧಿಕಾರಿ ಹಾಗೂ ಮಹಿಳಾ ಸಮಾಜಕ್ಕೆ ಅಗೌರವ ತೋರಿದ್ದಾರೆ. ಕೂಡಲೇ ಪೊಲೀಸರು ಹರೀಶ ಅವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಪ್ರಮುಖರಾದ ಮಂಜುನಾಥ ಸಂಭೋಜಿ, ರಾಜು ಅಂಗಡಿ, ಮಂಜುನಾಥ ಗುಡ್ಡಣ್ಣನವರ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net