ಆನ್​ಲೈನ್​ ಶಿಕ್ಷಣ: 3 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್​ ವಿತರಿಸಿದ ಹರಿಯಾಣ ಸರ್ಕಾರ

Tab
Published on

ಚಂಡಿಗಢ: ಆನ್​ಲೈನ್​ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಹರಿಯಾಣ ಸರ್ಕಾರ 3 ಲಕ್ಷ ಟ್ಯಾಬ್ಲೆಟ್​​ಗಳನ್ನು ವಿತರಿಸುವ ಇ-ಅಧಿಗಮ್​ ಯೋಜನೆಗೆ ಚಾಲನೆ ನೀಡಿದೆ.

ಈ ಯೋಜನೆಯಲ್ಲಿ 3 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್​ ನೀಡಲಾಗುವುದು. 10 ರಿಂದ 12 ನೇ ತರಗತಿ ವಿದ್ಯಾರ್ಥಿಗಳು ಇ ಯೋಜನೆ ವ್ಯಾಪ್ತಿಗೆ ಬರಲಿದ್ದು, ಸಾಫ್ಟ್​ವೇರ್ ಕಲಿಕೆಗೆ ಹೆಚ್ಚು ಅನುಕೂಲವಾಗಲು ಈ ನಿರ್ಧಾರ ಕೈಗೊಂಡಿದೆ ಎಂದು ಸರ್ಕಾರ ತಿಳಿಸಿದೆ.

ಇನ್ನೂ 5 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್​ ನೀಡುವ ಗುರಿ ಹೊಂದಿದ್ದು, 9ನೇ ತರಗತಿ ವಿದ್ಯಾರ್ಥಿಗಳಿಗೂ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಮನೋಹರ್​ ಲಾಲ್​ ಖಟ್ಟರ್ ತಿಳಿಸಿದ್ದಾರೆ. ಕರೊನಾ ಸಮಯದಲ್ಲಿ ಆನ್ಲೈನ್​ ಶಿಕ್ಷಣಕ್ಕೆ ಆಗಿದ್ದ ತೊಂದರೆಯನ್ನು ನಿವಾರಿಸಲು ಸರ್ಕಾರವೇ ಈ ತೀರ್ಮಾನ ಕೈಗೊಂಡಿದೆ ಎಂದು ಅವರು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net