ಹರಿಯಾಣ ವಿಧಾನಸಭೆ ಚುನಾವಣೆ; 67 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

bjp
Published on

ನವದೆಹಲಿ: ಅಕ್ಟೋಬರ್ ತಿಂಗಳಲ್ಲಿ ನಡೆಯಲಿರುವ ಹರಿಯಾಣ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 67 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದ್ದು, ಪಕ್ಷಕ್ಕೆ ಹೊಸದಾಗಿ ಸೇರ್ಪಡೆಯಾಗಿರುವವರಿಗೂ ಬಿಜೆಪಿ ಹೈಕಮಾಂಡ್​ ಮಣೆ ಹಾಕಿದೆ.

ಸಿಎಂ ನಯಾಬ್ ಸೈನಿ ಲಾಡ್ವಾದಿಂದ, ಹರಿಯಾಣ ಬಿಜೆಪಿಯ ಮಾಜಿ ಅಧ್ಯಕ್ಷ ಓಂ ಪ್ರಕಾಶ್ ಧನಕರ್ ಅವರನ್ನು ಬದ್ಲಿಯಿಂದ ಮತ್ತು ಪಕ್ಷದ ಹಿರಿಯ ನಾಯಕ ಅನಿಲ್ ವಿಜ್ ಅಂಬಾಲಾ ಕ್ಯಾಂಟ್‌ನಿಂದ ಕಣಕ್ಕಿಳಿಯಲಿದ್ದಾರೆ. ಇತ್ತೀಚೆಗೆ ಬಿಜೆಪಿ ಸೇರಿದ ದೇವೆಂದರ್ ಸಿಂಗ್ ಬಬ್ಲಿ, ಸಂಜಯ್ ಕಬ್ಲಾನಾ ಮತ್ತು ಶ್ರುತಿ ಚೌಧರಿ ಕ್ರಮವಾಗಿ ತೊಹಾನಾ, ಬೆರಿ ಮತ್ತು ತೋಷಮ್ ಕ್ಷೇತ್ರಗಳಿಂದ ಸ್ಪರ್ಧಿಸಲಿದ್ದಾರೆ.

ಕ್ಯಾಪ್ಟನ್ ಅಭಿಮನ್ಯು, ಕುಲದೀಪ್ ಬಿಷ್ಣೋಯ್ ಪುತ್ರ ಭವ್ಯ ಬಿಷ್ಣೋಯ್, ಮಾಜಿ ಸಂಸದೆ ಸುನೀತಾ ದುಗ್ಗಲ್ ಅವರ ಹೆಸರುಗಳೂ ಪಟ್ಟಿಯಲ್ಲಿವೆ. ಅಕ್ಟೋಬರ್ 5 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 8 ರಂದು ಮತ ಎಣಿಕೆ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net