

ಹಾಸನ: ಸಪ್ತಮಾತೃಕೆಯರಲ್ಲಿ ಒಬ್ಬಳಾದ ಹಾಗೂ ವರ್ಷಕ್ಕೊಮ್ಮೆ ಮಾತ್ರವೇ ದರ್ಶನ ಭಾಗ್ಯ ಕರುಣಿಸುವ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ.
ಹಾಸನಾಂಬೆ ಜಾತ್ರೆ ಪ್ರಯುಕ್ತ ಸೋಮವಾರ ದೇವಿಯ ಆಭರಣಗಳನ್ನು ದೇವಾಲಯಕ್ಕೆ ತರಲಾಯಿತು. ಖಜಾನೆಯಲ್ಲಿ ರಿಸಿದ್ದ ಆಭರಣಗಳನ್ನು ಹೊರತಂದು, ಅಡ್ಡ ಪಲ್ಲಕ್ಕಿ ಮೇಲಿರಿಸಿ ಸಂಪ್ರದಾಯದಂತೆ ಮಡಿವಾಳರು ಪಂಜು ಹಾಗೂ ಮುತ್ತೈದೆಯರು ಆರತಿ ಬೆಳಗಿದರು. ವಿವಿಧ ಬಗೆಯ ಹೂವುಗಳಿಂದ ಸಿಂಗರಿಸಿದ್ದ ಅಡ್ಡಪಲ್ಲಕ್ಕಿ ಮೇಲೆ ಆಭರಣ ಇರಿಸುತ್ತಿದ್ದಂತೆ ಭಕ್ತರು ಹಾಸನಾಂಬೆಗೆ ಜೈಕಾರ ಕೂಗಿದರು.
ನ.5ರಂದು ಹಾಸನಾಂಬೆ ದೇವಾಲಯದ ಗರ್ಭಗುಡಿಯ ಬಾಗಿಲು ತೆರೆಯಲಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವಿಲ್ಲ. ನಗರದ ಅಲ್ಲಲ್ಲಿ ಎಲ್ಇಡಿ ಪರದೆ ಮೇಲೆ ದೇವಿಯ ದರ್ಶನ ಮಾಡಲು ಅವಕಾಶ ಕಲ್ಪಿಸಲಾಗಿದೆ.