ಬನ್ನೂರಿನಲ್ಲಿ ಹಸಿರು ಸೇನೆ ಪ್ರತಿಭಟನೆ

29 bannur 1
Published on

ಬನ್ನೂರು: ಪಟ್ಟಣದ ಕಾವೇರಿ ವೃತ್ತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.


ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಮೈಸೂರು ಭಾಗದ ಬೆಳೆಗಳಿಗೆ ನೀರು ಹರಿಸದೆ ತಮಿಳುನಾಡಿಗೆ ನೀರು ಹರಿಸುವುದು ಎಷ್ಟರ ಮಟ್ಟಿಗೆ ಸರಿ. ಸರ್ಕಾರ ರಾಜ್ಯದ ರೈತರ ಹಿತ ಕಾಪಾಡದೆ ತಮಿಳುನಾಡು ಬೆಂಬಲಕ್ಕೆ ನಿಂತಂತೆ ಕಾಣುತ್ತಿದೆ ಎಂದು ದೂರಿದರು.ಸುಪ್ರೀಂಕೋರ್ಟ್ ತೀರ್ಪು ಅವೈಜ್ಞಾನಿಕವಾಗಿದೆ. ಕೂಡಲೇ ನೀರು ನಿಲ್ಲಿಸಿ ರಾಜ್ಯದ ರೈತರ ಹಿತ ಕಾಪಾಡಬೇಕು ಎಂದು ರ್ಕಾರವನ್ನು ಒತ್ತಾಯಿಸಿದರು. ಪ್ರತಿಭಟನೆಯಿಂದಾಗಿ ವಾಹನ ಸವಾರರು ಪರದಾಡುವಂತಾಯಿತು.


ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಅಧ್ಯಕ್ಷ ಹುಚ್ಚೇಗೌಡ, ಶಿವಕುಮಾರ್, ಮಹೇಶ್, ಆನಂದ್, ಪ್ರಭಾ, ಜಯರಾಮ, ಮಹೇಂದ್ರ, ರಾಮಚಂದ್ರು, ಕಿರಣ್, ಕೃಷ್ಣ, ಮಹೇಶ್, ಶಿವರಾಮು, ನಾಗರಾಜು, ರವಿ, ಚಾಮೇಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net