

ಹಾಸನ : ಹಾಸನ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಂ ಜೆ.ಗೌಡ ಅವರಿಗೆ ಕರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿರುವ ಗೌಡ, "ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಮುಂಜಾಗ್ರತಾ ಕ್ರಮವಾಗಿ ಐಸೋಲೇಶನ್ಗೆ ಒಳಗಾಗಿದ್ದೇನೆ" ಎಂದು ಟ್ವೀಟ್ ಮಾಡಿದ್ದಾರೆ.
ಜೊತೆಗೆ, "ನನ್ನ ಜೊತೆ ಸಂಪರ್ಕದಲ್ಲಿದ್ದ ಎಲ್ಲರೂ ಆದಷ್ಟು ಬೇಗ ಕೋವಿಡ್ ಪರೀಕ್ಷೆ ಮಾಡಿಸಿ, ಆರೋಗ್ಯದ ಕಡೆ ಗಮನ ಹರಿಸಿ, ತಾಯಿ ಹಾಸನಾಂಬೆಯ ಆಶೀರ್ವಾದ ಮತ್ತು ನಿಮ್ಮೆಲ್ಲರ ಹಾರೈಕೆಗಳಿಂದ ಬೇಗ ಗುಣಮುಖನಾಗುತ್ತೇನೆ" ಎಂದಿದ್ದಾರೆ.