

ಬೆಂಗಳೂರು: ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ. ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಪ್ರಜ್ವಲ್ ವಿರುದ್ಧ ವಾರೆಂಟ್ ಹೊರಡಿಸಿದೆ.
ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೋಟಿಸ್ ಜಾರಿ ಮಾಡಿದರು ಪ್ರಜ್ವಲ್ ಬಾರದೇ, ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಕಾರಣ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ. ಪ್ರೀತ್ ವಾದ-ಪ್ರತಿವಾದವನ್ನು ಆಲಿಸಿದ ಬಳಿಕ ಅರೆಸ್ಟ್ ವಾರೆಂಟ್ ಹೊರಡಿಸಿದ್ದಾರೆ.
ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ನೋಟಿಸ್ ಕೊಟ್ಟರೂ ಪ್ರಜ್ವಲ್ ರೇವಣ್ಣ ಪ್ರತಿಕ್ರಿಯಿಸಿರಲಿಲ್ಲ. ಮೊದಲ ನೋಟಿಸ್‌ಗೆ ಹಾಜರಾಗಲು 7 ದಿನಗಳ ಕಾಲಾವಕಾಶ ಕೇಳಿದ್ದರು. ಆದರೆ 22 ದಿನಗಳಾದರೂ ಪ್ರಜ್ವಲ್ ರೇವಣ್ಣ ವಿದೇಶದಿಂದ ವಾಪಸ್ಸಾಗಿಲ್ಲ. ಇದೀಗ ಕೋರ್ಟ್ ವಾರೆಂಟ್ ಹೊರಡಿಸಿರೋದ್ರಿಂದ ಈ ಬಾರಿಯಾದ್ರೂ ಪ್ರಜ್ವಲ್ ವಿಚಾರಣೆಗೆ ಬರ್ತಾರಾ ಎಂಬ ಪ್ರಶ್ನೆ ಮೂಡಿದೆ.