ಹಾಸನ ಟ್ರಕ್ ದುರಂತ; ಆಸ್ಪತ್ರೆಗೆ ಭೇಟಿ ನೀಡಿ ಜೆಡಿಎಸ್​ನಿಂದ ತಲಾ 1 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ದೇವೇಗೌಡ | Hassan Tragedy

hdd
Published on

ಹಾಸನ; ನಿನ್ನೆ ರಾತ್ರಿ (ಸೆ.12) ಹಾಸನದ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಏಕಾಏಕಿ ಟ್ರಕ್ ಹರಿದ ಪರಿಣಾಮ, ಹತ್ತು ಜನ ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ. ಇನ್ನೂ ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡ ಅವರು ಇಂದು (ಸೆ.13) ಹಾಸನದ ಹಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ಈ ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಜೆಡಿಎಸ್ ಪಕ್ಷದ ವತಿಯಿಂದ ತಲಾ 1 ಲಕ್ಷ ರೂ. ಪರಿಹಾರ ನೀಡುವುದಾಗಿ ದೇವೇಗೌಡರು ಘೋಷಣೆ ಹೊರಡಿಸಿದ್ದಾರೆ. ಗಂಭೀರವಾಗಿ ಗಾಯಗೊಂಡವರಿಗೆ 25 ಸಾವಿರ ರೂ, ಸ್ವಲ್ಪ ಮಟ್ಟದಲ್ಲಿ ಗಾಯಗೊಂಡವರಿಗೆ 20 ಸಾವಿರ ರೂ, ಜೊತೆಗೆ ಚಿಕ್ಕಪುಟ್ಟ ಗಾಯಾಳುಗಳಿಗೆ ತಲಾ 15 ಸಾವಿರ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ಏನಿದು ಘಟನೆ?

ಹೊಳೆನರಸೀಪುರ ಕಡೆ ಹೊರಟಿದ್ದ ಕ್ಯಾಂಟರ್‌ ಡಿಕ್ಕಿಯಾಗಿ ಗಂಭೀರ ಅಪಘಾತ ಸಂಭವಿಸಿತ್ತು. ರಸ್ತೆಯಲ್ಲಿ ಅಡ್ಡ ಬಂದ ಬೈಕ್‌ ಸವಾರನನ್ನು ತಪ್ಪಿಸಲು ಹೋಗಿ ಕ್ಯಾಂಟರ್‌ ಚಾಲಕ ಮೆರವಣಿಗೆಯ ಮೇಲೆ ವಾಹನ ಹತ್ತಿಸಿದ್ದನು. ಈ ಘಟನೆ ಬಗ್ಗೆ ಕೇಂದ್ರ ಸಚಿವ ಎಚ್​​ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ ಮೃತರಿಗೆ ಸಂತಾಪ ಸೂಚಿಸಿದ್ದರು. ರಾಜ್ಯ ಸರ್ಕಾರ ಗಾಯಾಳುಗಳಿಗೆ ಉತ್ತಮ, ಉಚಿತ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದರು.

ಮೃತರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಪರಿಹಾರ

ಘಟನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ಸಿಎಂ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net