ಪ್ರಧಾನಿ ಮೋದಿ, ಅಮಿತ್​ ಷಾ ಏನು ನಿರ್ಧರಿಸುತ್ತಾರೋ ಅದಕ್ಕೆ ಬದ್ಧ; ಮಹಾ ಸಿಎಂ ಜಟಾಪಟಿ ಕುರಿತಂತೆ ಸ್ಪಷ್ಟನೆ ನೀಡಿದ Eknath Shinde

Eknath Shinde
Published on

ಮುಂಬೈ: ಈಚೆಗೆ ಮುಕ್ತಾಯಗೊಂಡ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಶಿವಸೇನೆ-ಬಿಜೆಪಿ-ಎನ್​ಸಿಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು ಭರ್ಜರಿ ಗೆಲುವು ಸಾಧಿಸಿದ್ದು, ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದಂತೆ ಶಿವಸೇನೆ (ಏಕನಾಥ್​ ಶಿಂಧೆ ಬಣ) ಹಾಗೂ ಬಿಜೆಪಿ ನಡುವೆ ಜಟಾಪಟಿ ನಡೆಯುತ್ತಿದೆ. ಮಹಾರಾಷ್ಟ್ರದ ಸಿಎಂ ಚುಕ್ಕಾಣಿ ಹಿಡಿಯುವವರು ಯಾರು ಎಂಬ ಪ್ರಶ್ನೆ ಮೂಡಿರುವ ನಡುವೆಯೇ ಹಂಗಾಮಿ ಸಿಎಂ ಏಕನಾಥ್​ ಶಿಂಧೆ (Eknath Shinde) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಬಿಜೆಪಿ ಯಾವ ನಿರ್ಧಾರ ತೆಗೆದುಕೊಂಡರೂ ನಾವು ಅದಕ್ಕೆ ಬದ್ಧರಿದ್ದೇವೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಏಕನಾಥ್​ ಶಿಂಧೆ (Eknath Shinde), ನಾನೆಂದೂ ಮುಖ್ಯಮಂತ್ರಿಯಾಗುತ್ತೇನೆ ಎಂದು ಕನಸು ಕಂಡಿರಲಿಲ್ಲ. ಕಳೆದ ಎರಡೂವರೆ ವರ್ಷಗಳಲ್ಲಿ ನಾನು ಜನಸಾಮಾನ್ಯನಂತೆ ಇದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸಲು ಪ್ರಯತ್ನಿಸಿದ್ದೇನೆ. ನನಗೆ ಆ ಬಗ್ಗೆ ಆತ್ಮತೃಪ್ತಿಯಿದೆ. ಈ ಬಾರಿಯ ಗೆಲುವು ಜನರ ಗೆಲುವು. ನಮ್ಮ ಸರ್ಕಾರಕ್ಕೆ ನೀಡಿದ ಸಹಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳು. ಅವರ ಮಾರ್ಗದರ್ಶನದಲ್ಲಿ ಈ ಬಾರಿ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಕಾಣಲು ಸಾಧ್ಯವಾಯಿತು.

ನಾನು ಎರಡೂವರೆ ವರ್ಷದ ಆಡಳಿತದ ಬಗ್ಗೆ ತೃಪ್ತಿ ಹೊಂದಿದ್ದೇನೆ. ಮಹಾರಾಷ್ಟ್ರದಲ್ಲಿ ನಮ್ಮ ಸರ್ಕಾರದ ಗೆಲುವಿಗೆ ನಮ್ಮ ಬೆನ್ನೆಲುಬಾಗಿ ನಿಂತಿದ್ದು ಬಿಜೆಪಿ. ಹೀಗಾಗಿ, ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯ ಆಯ್ಕೆಯನ್ನು ಕೂಡ ನರೇಂದ್ರ ಮೋದಿಯವರಿಗೆ ಬಿಟ್ಟಿದ್ದೇನೆ. ಅವರ ನಿರ್ಧಾರವೇ ಅಂತಿಮ. ಬಿಜೆಪಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರವನ್ನು ನಾವು ಗೌರವಿಸುತ್ತೇವೆ.

ಮುಖ್ಯಮಂತ್ರಿ ಸ್ಥಾನದ ಆಸೆ ನನಗೆ ಇಲ್ಲ. ಬಿಜೆಪಿ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೂ ನಾನು ಬದ್ಧನಾಗಿರುತ್ತೇನೆ. ಪ್ರಧಾನಿ ಮೋದಿ, ಅವಿತ್ ಷಾ ಮುಖ್ಯಮಂತ್ರಿ ಯಾರಾಗಬೇಕು ಎಂದು ನಿರ್ಧರಿಸುತ್ತಾರೆ. ಈ ಬಗ್ಗೆ ಅವರಿಗೆ ಕರೆ ಮಾಡಿ ಹೇಳಿದ್ದೇನೆ. ಸರ್ಕಾರ ರಚನೆಯಾಗಲು ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಹಂಗಾಮಿ ಮುಖ್ಯಮಂತ್ರಿ ಏಕನಾಥ್​ ಶಿಂಧೆ (Eknath Shinde) ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net