ಬಾಲಿವುಡ್​ ನಟಿ ಪರಿಣಿತಿ ಚೋಪ್ರಾ, ರಾಘವ್ ಚಡ್ಡಾ ಮದುವೆ ದಿನಾಂಕ ಫಿಕ್ಸ್​​

Parineeti Chopra
Published on

ಮುಂಬೈ: ನಟಿ ಪರಿಣಿತಿ ಚೋಪ್ರಾ ಅವರು ಈ ವರ್ಷದ ಆರಂಭದಲ್ಲಿ ರಾಜಕೀಯ ನಾಯಕ ರಾಘವ್ ಚಡ್ಡಾ ಮೇ 13ರಂದು ನವದೆಹಲಿಯಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಉಂಗುರ ಬದಲಾಯಿಸಿಕೊಂಡಿದ್ದರು. ಇದೀಗ ಈ ಜೋಡಿ ಮದುವೆ ದಿನಾಂಕವನ್ನು ಫಿಕ್ಸ್​​ ಮಾಡಿಕೊಂಡಿದೆ.

ಸೆಪ್ಟೆಂಬರ್ 25ರಂದು ಪರಿಣಿತಿ ಚೋಪ್ರಾ-ರಾಘವ್‌ ಚಡ್ಡಾ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ಹೇಳಲಾಗ್ತಿದೆ. ರಾಜಸ್ಥಾನದಲ್ಲಿ ಅದ್ಧೂರಿ ಸಮಾರಂಭದಲ್ಲಿ ಪರಿಣಿತಿ ಮತ್ತು ರಾಘವ್ ಮದುವೆಯಾಗಲು ತಯಾರಿ ನಡೆಸುತ್ತಿದ್ದಾರೆ.

ಪರಿಣಿತಿ ಅವರ ತಂಡವು ಅವರ ಮದುವೆಯ ಸಿದ್ಧತೆಗಳನ್ನು ಪ್ರಾರಂಭಿಸಿದೆ ಎಂದು ಸಹ ಹೇಳಲಾಗ್ತಿದೆ. ಮದುವೆಯ ನಂತರ ಗುರುಗ್ರಾಮ್‌ನಲ್ಲಿ ಅದ್ಧೂರಿ ಆರತಕ್ಷತೆ ನಡೆಯಲಿದೆ ಎಂದು ತಿಳಿದುಬಂದಿದೆ.

ಪರಿಣಿತಿ ಈಗಾಗಲೇ ಇಮ್ತಿಯಾಜ್ ಅಲಿ ಅವರ ಚಮ್ಕಿಲಾ ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ, ಇದರಲ್ಲಿ ಅವರು ದಿಲ್ಜಿತ್ ದೋಸಾಂಜ್ ಅವರೊಂದಿಗೆ ಪರದೆಯನ್ನು ಹಂಚಿಕೊಳ್ಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net