

ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ದ್ವೀತಿಯ ವರ್ಷಾಚರಣೆಯ ಸವಿನೆನಪಿಗೆ ಬಿಂಬ ಪ್ರತಿಬಿಂಬಗಳು ಕಥಾ ಸಂಪುಟ ಬಿಡುಗಡೆ ಸಮಾರಂಭ ಜ. 7ರಂದು ಸಂಜೆ 6 ಗಂಟೆಗೆ ಗೆಳೆಯರ ಬಳಗದ ಪ್ರಾಥಮಿಕ ಶಾಲಾ ಆವರಣದಲ್ಲಿ ಜರುಗಲಿದೆ.
ಗೆಳೆಯರ ಬಳಗ, ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಅರಳಿಕಟ್ಟಿ ಪ್ರಕಾಶನ ಹಾಗೂ ಸಾಹಿತಿ ಕಲಾವಿದರ ಬಳಗದ ಸಂಯುಕ್ತ ಆಶ್ರಯದಲ್ಲಿ ಜರುಗುವ ಸಮಾರಂಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲಿಂಗಯ್ಯ ಹಿರೇಮಠ ಅಧ್ಯಕ್ಷತೆ ವಹಿಸುವರು. ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಾ.ಟಿ.ಎಂ. ಭಾಸ್ಕರ್ ಕಥಾ ಸಂಪುಟ ಬಿಡುಗಡೆ ಮಾಡುವರು. ಲೇಖಕ ಲಿಂಗರಾಜ ಸೊಟ್ಟಪ್ಪನವರ ಹಾಗೂ ಕವಯತ್ರಿ ದೀಪಾ ಗೋನಾಳ ಪುಸ್ತಕ ಪರಿಚಯಿಸುವರು.
ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಲಿಂಗರಾಜ ಅಂಗಡಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪದವಿ ಪೂರ್ವ ಉಪನಿರ್ದೇಶಕ ಡಾ.ಉಮೇಶಪ್ಪ ಎಚ್, ಗೆಳೆಯರ ಬಳಗದ ಅಧ್ಯಕ್ಷ ಡಾ. ಸುದೀಪ ಪಂಡಿತ, ಹಾವೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವೈ.ಬಿ.ಆಲದಕಟ್ಟಿ, ಗೊಟಗೋಡಿಯ ಶಿಲ್ಪ ಕಲಾ ಕುಟೀರದ ರಾಜಹರ್ಷ ಸೊಲಬಕ್ಕನವರ ಹಾಗೂ ಸಾಹಿತಿ ಕಲಾವಿದರ ಬಳಗದ ಡಾ.ಗೀತಾ ಸುತ್ತಕೋಟಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.