ಬಸ್​ ನಿಲ್ದಾಣಕ್ಕೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಭೇಟಿ, ಪರಿಶೀಲನೆ

2-RNR-10
Published on

ಹಾವೇರಿ: ನಗರದ ಕೇಂದ್ರ ಬಸ್​ ನಿಲ್ದಾಣಕ್ಕೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಸ್​ ನಿಲ್ದಾಣದ ಸ್ವಚ್ಛತೆ, ಶೌಚಗೃಹ, ಕುಡಿಯುವ ನೀರಿನ ವ್ಯವಸ್ಥೆ, ವಾಹನ ನಿಲುಗಡೆ ವ್ಯವಸ್ಥೆ ಪರಿಶೀಲಿಸಿದ ಅವರು, ಬಸ್​ ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಬಸ್​ ಸಂಚಾರ ಮಾರ್ಗಗಳ ಕುರಿತು ಧ್ವನಿವರ್ಧಕದ ಮೂಲಕ ಮಾಹಿತಿ ನೀಡುವ ಮೂಲಕ ಪ್ರಯಾಣಿಕರಿಗೆ ಅನುಕೂಲಕರ ವಾತಾವರಣ ನಿರ್ಮಾಣ ಮಾಡಿಕೊಡಬೇಕು ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸೂಚನೆ ನೀಡಿದರು.
ನಗರಸಭೆ ಆಯುಕ್ತ ಪರಶುರಾಮ ಚಲವಾದಿ, ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net