ಹಾವೇರಿ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸಂವಿಧಾನ ದಿನಾಚರಣೆ ಅಂಗವಾಗಿ ಸಂವಿಧಾನ ಬಚಾವೋ ದಿವಸ ಕಾರ್ಯಕ್ರಮ ಆಚರಿಸಲಾಯಿತು. ಸಂವಿಧಾನ ಪೀಠಿಕೆ ಓದಲಾಯಿತು. ಪಕ್ಷದ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್‌ಎಫ್‌ಎನ್ ಗಾಜಿಗೌಡ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಕರ ಮೆಹರವಾಡೆ, ಬ್ಲಾಕ್ ಅಧ್ಯಕ್ಷರಾದ ಎಂ.ಎಂ.ಮೈದೂರ, ಶಹರ ಘಟಕದ ಅಧ್ಯಕ್ಷ ಪ್ರಭುಗೌಡ್ರ ಬಿಷ್ಟನಗೌಡರ, ಬಾಬು ಮೊಮಿನಗಾರ, ಉಮರ್ ಇನಾಮದಾರ, ನಗರಸಭೆ ಸದಸ್ಯರು, ಮಾಜಿ ಸದ್ಯಸರು, ಕಾರ್ಯಕರ್ತರು ಇದ್ದರು