ರೈತನ ಬೆನ್ನೆಲಬು ಸಹಕಾರಿ ಚಳವಳಿ; ಸಚಿವ ಶಿವಾನಂದ ಪಾಟೀಲ ಹೇಳಿಕೆ

IMG-20250720-WA0034
Published on

ಹಾವೇರಿ: ದೇಶದ ಬೆನ್ನೆಲಬು ರೈತ, ರೈತನ ಬೆನ್ನೆಲಬು ಸಹಕಾರಿ ಚಳವಳಿ. ರೈತರಿಗೆ ಪತ್ತಿನ ಅಗತ್ಯವಿದ್ದು, ಲಭ್ಯವಾಗದಿದ್ದರೆ ಕೃಷಿ ಮಾಡುವುದು ಕಷ್ಟವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.

ಇಲ್ಲಿನ ಗುರುಭವನದಲ್ಲಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕ - ಶಿಕ್ಷಕಿಯರ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಷ್ಟ್ರೀಕೃತ ಬ್ಯಾಂಕುಗಳನ್ನು ಆಶ್ರಯಿಸಿ ರೈತರು ಒಕ್ಕಲುತನ ಮಾಡುವುದು ಕಷ್ಟ. ಹೀಗಾಗಿಯೇ ರಾಜ್ಯ ಸರ್ಕಾರ ಡಿಸಿಸಿ ಬ್ಯಾಂಕ್​?ಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಣೆಗೆ ಕ್ರಮ ಕೈಗೊಂಡಿದೆ ಎಂದು ಹೇಳಿದರು.

ದೇಶದಲ್ಲಿ ಮೂರು ರಾಜ್ಯಗಳು ಮಾತ್ರ ಸಹಕಾರಿ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿವೆ. ಮಹಾರಾಷ್ಟ್ರ, ಗುಜರಾತ್​ ಮತ್ತು ಕರ್ನಾಟಕ ರಾಜ್ಯಗಳಲ್ಲಿ ಸಹಕಾರ ಚಳವಳಿ ದೊಡ್ಡ ಪ್ರಮಾಣದಲ್ಲಿ ಆಗಿದೆ. ಮಹಾರಾಷ್ಟ್ರ ಸರ್ಕಾರದಲ್ಲಿ ಹಿಂದಿನ ಮುಖ್ಯಮಂತ್ರಿಗಳು ಸಹಕಾರ ಖಾತೆಯನ್ನು ತಮ್ಮ ಬಳಿ ಇಟ್ಟುಕೊಳ್ಳುತ್ತಿದ್ದರು. ಇದು ಸಹಕಾರಿ ಚಳವಳಿಯ ಮಹತ್ವಕ್ಕೆ ಸಾಕ್ಷಿ ಎಂದು ಹೇಳಿದರು.

ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು

ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್​.ಎಫ್​.ಎನ್​. ಗಾಜಿಗೌಡರ್​, ಜಿಲ್ಲಾ ಕಾಂಗ್ರೆಸ್​ ಅಧ್ಯಕ್ಷ ಸಂಜೀವ ನೀರಲಗಿ, ನಗರಸಭೆ ಅಧ್ಯಕ್ಷೆ ಶಶಿಕಲಾ ರಾಮು ಮಾಳಗಿ, ಉಪಾಧ್ಯಕ್ಷ ಮಲ್ಲಣ್ಣ ಸಾತೇನಹಳ್ಳಿ, ಎಂ.ಎಂ. ಮೈದೂರ, ಡಿಡಿಪಿಐ ಸುರೇಶ ಹುಗ್ಗಿ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net