ಹವ್ಯಕ ಮಹಾಸಭೆಗೆ ಪದಾಧಿಕಾರಿಗಳ ಆಯ್ಕೆ

GK
Published on

ಬೆಂಗಳೂರು: ಹವ್ಯಕ ಮಹಾಸಭೆಯ ಅಧ್ಯಕ್ಷರಾಗಿ ಡಾ. ಗಿರಿಧರ ಕಜೆ 9ನೇ ಬಾರಿಗೆ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಆರ್. ಎಂ. ಹೆಗಡೆ ಮತ್ತು ಶ್ರೀಧರ್ ಜೆ. ಭಟ್ಟ ಕೆಕ್ಕಾರು, ಪ್ರಧಾನ ಕಾರ್ಯದರ್ಶಿಯಾಗಿ ಸಿ.ಎ. ವೇಣುವಿಘ್ನೇಶ ಸಂಪ, ಕಾರ್ಯದರ್ಶಿಯಾಗಿ ಪ್ರಶಾಂತ ಕುಮಾರ ಜಿ. ಭಟ್ಟ ಮಲವಳ್ಳಿ ಮತ್ತು ಆದಿತ್ಯ ಹೆಗಡೆ ಕಲಗಾರು, ಕೋಶಾಧಿಕಾರಿಯಾಗಿ ಕೃಷ್ಣಮೂರ್ತಿ ಎಸ್. ಭಟ್ ಯಲಹಂಕ ಅವರನ್ನು ಆಯ್ಕೆ ಮಾಡಲಾಗಿದೆ.

ಇದಕ್ಕೂ ಮುನ್ನ ನಡೆದ ವಿವಿಧ ಪ್ರಾಂತ್ಯಗಳ 15 ನಿರ್ದೇಶಕರ ಸ್ಥಾನಗಳ ಚುನಾವಣೆಯಲ್ಲಿ 15 ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net