ಮತ್ತೆ 6 ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಎಚ್.ಡಿ.ಕುಮಾರಸ್ವಾಮಿ; ಎನ್.ಆರ್ ಸಂತೋಷ್, ದೇವರಾಜ್ ಪಾಟೀಲ್ ಜೆಡಿಎಸ್​ಗೆ ಸೇರ್ಪಡೆ

JDS
Published on

ಬೆಂಗಳೂರು: ಈಗಾಗಲೇ ಪ್ರಸಕ್ತ ವಿಧಾನಸಭೆ ಚುನಾವಣೆಯ ಜೆಡಿಎಸ್ ಅಭ್ಯರ್ಥಿಗಳ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಶನಿವಾರ ಮತ್ತೆ ಆರು ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದ್ದಾರೆ.

ಚಿತ್ರದುರ್ಗ- ವಿಧಾನ ಪರಿಷತ್​ನ ಮಾಜಿ ಸದಸ್ಯ ರಘು ಅಚಾರ್
ಮಡಿಕೇರಿ- ಎನ್.ಎಂ.ಮುತ್ತಪ್ಪ
ಮೂಡಬಿದಿರೆ- ಅಮರಶ್ರೀ
ವರುಣಾ- ಮಾಜಿ ಶಾಸಕ ಡಾ.ಭಾರತಿ ಶಂಕರ್
ಬಾಗಲಕೋಟೆ- ದೇವರಾಜ್ ಪಾಟೀಲ್
ಯಾದಗಿರಿ- ಮಾಜಿ ಸಚಿವ ಎ.ಬಿ.ಮಾಲಕರೆಡ್ಡಿ ಅವರುಗಳು ಜೆಡಿಎಸ್ ಅಭ್ಯರ್ಥಿಗಳೆಂದು ಎಚ್​.ಡಿ. ಕುಮಾರಸ್ವಾಮಿ ಪ್ರಕಟಿಸಿದ್ದಾರೆ.

ಎನ್​. ಆರ್ ಸಂತೋಷ್, ದೇವರಾಜ್ ಪಾಟೀಲ್ ಸೇರ್ಪಡೆ

ಇದೇ ಸಂದರ್ಭದಲ್ಲಿ ಅರಸೀಕೆರೆ ವಿಧಾನಸಭೆ ಕ್ಷೇತ್ರದ ಎನ್​ ಆರ್ ಸಂತೋಷ್ ಅವರು ಬಿಜೆಪಿ ತೊರೆದು ಜೆಡಿಎಸ್ ಪಕ್ಷವನ್ನು ಸೇರಿದರು. ಹಾಗೆಯೇ, ಬಾಗಲಕೋಟೆಯ ದೇವರಾಜ್ ಪಾಟೀಲ್ ಅವರು ಕಾಂಗ್ರೆಸ್ ತೊರೆದು ಪಕ್ಷಕ್ಕೆ ಸೇರಿದರು. ಕುಮಾರಸ್ವಾಮಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಇಬ್ಬರು ನಾಯಕರಿಗೆ ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net