ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ವಂತ ಸೂರಿಲ್ಲದವರಿಗೆ ಮನೆ ಕಟ್ಟಿಸಿಕೊಡುತ್ತೇವೆ; ಎಚ್​ಡಿಕೆ ಭರವಸೆ

HDK
Published on

ಹಾಸನ: ಚುನಾವಣಾ ಸಮಯ ಹತ್ತಿರವಾಗುತ್ತಿದ್ದಂತೆ ಪ್ರಮುಖ ರಾಜಕೀಯ ಪಕ್ಷಗಳು ಪ್ರಚಾರದ ಕಾರ್ಯ ಆರಂಭಿಸಿವೆ. ಹೊಸ ಹೊಸ ಯೋಜನೆ, ಕೊಡುಗೆಗಳನ್ನು ಘೋಷಣೆ ಮಾಡುತ್ತಾ, ಮತದಾರರನ್ನು ಸೆಳೆಯುವ ಪ್ರಯತ್ನ ಕಾರ್ಯ ಜೋರಾಗಿದೆ. ಚುನಾವಣೆಗೂ ಮುನ್ನ ಪ್ರಚಾರದ ಭಾಗವಾಗಿ ರಾಜ್ಯಾದ್ಯಾಂತ ಪಂಚರತ್ನ ರಥಯಾತ್ರೆಯ ಮೂಲಕ ಪ್ರವಾಸ ಮಾಡುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಈ ಬಾರಿ ನಾವೇ ಅಧಿಕಾರಕ್ಕೆ ಬರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ.

ಇದೀಗ ಹೊಳೆನರಸೀಪುರ ನಗರತಿ ಗ್ರಾಮದಲ್ಲಿ ಎಚ್.ಡಿ. ಕುಮಾರಸ್ವಾಮಿ ಮಾತನಾಡುತ್ತಾ, ಪ್ರತಿಯೊಂದು ಕುಟುಂಬಕ್ಕೂ ಸ್ವಂತ ಮನೆ ಇರಬೇಕು. ಯಾರಿಗೆ ಮನೆ ಇಲ್ಲವೋ ಅವರಿಗೆ 5 ಲಕ್ಷ ರೂಪಾಯಿಯಲ್ಲಿ ಮನೆ ಕಟ್ಟಿಸಿಕೊಡುತ್ತೇವೆ. ಇದಕ್ಕಾಗಿ 2.50ಲಕ್ಷ ಕೋಟಿ ರೂ. ಬೇಕು. ಇಷ್ಟು ದೊಡ್ಡ ಮೊತ್ತವನ್ನು ಹೇಗೆ ತರಬೇಕು ಎಂಬುದು ಗೊತ್ತಿದೆ ಎಂದು ಹೇಳಿದರು.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 40-50 ಸ್ಥಾನ ಗೆದ್ದರೆ ಈ ಯೋಜನೆ ಪೂರ್ಣಗೊಳಿಸಲು ಸಾಧ್ಯವಿಲ್ಲ. ಇದಕ್ಕಾಗಿ ಸ್ಪಷ್ಟ ಬಹುಮತ ಬೇಕು. ಬಿಜೆಪಿ-ಜೆಡಿಎಸ್ ಜತೆ ಸೇರಿ 6 ತಿಂಗಳು ಅಧಿಕಾರ ಮಾಡಿದರೆ ಆಗುವುದಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net