ಹಾದಿ ಬೀದಿಯಲ್ಲಿ ಹತ್ಯೆಗಳಾಗುತ್ತಿವೆ, ಇನ್ನು ಕಾನೂನು ಸುವ್ಯವಸ್ಥೆ ಬಗ್ಗೆ ಹೇಳಬೇಕಾ?: ಎಚ್​​ಡಿಕೆ

Untitled design (87)
Published on

ಬೆಂಗಳೂರು: ರಾಜ್ಯದಲ್ಲಿ ಹಾದಿ ಬೀದಿಯಲ್ಲಿ ಕೊಲೆಗಳಾಗುತ್ತಿವೆ. ಇನ್ನು ಕಾನೂನು ಸುವ್ಯವಸ್ಥೆ ಬಗ್ಗೆ ಪ್ರತ್ಯೇಕವಾಗಿ ಹೇಳಬೇಕಾ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಖಾರವಾಗಿ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಶಂಕಿತ ಉಗ್ರರನ್ನು ಬಂಧಿಸಿದ ಘಟನೆಗೆ ಸಂಬಂಧಿಸಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಅನಾಹುತ ಆಗುವ ಮುನ್ನವೇ ಶಂಕಿತ ಭಯೋತ್ಪಾದಕರನ್ನು ಹಿಡಿದಿರುವ ಪೊಲೀಸ್ ಅಧಿಕಾರಿಗಳನ್ನು ಅಭಿನಂದಿಸುತ್ತೇನೆ. ಇಂತಹ ಸೂಕ್ಷ್ಮ ವಿಚಾರದಲ್ಲಿ ಅವರು ಉತ್ತಮವಾಗಿ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

ಸರ್ಕಾರ ಕೂಡ ಈ ಬಗ್ಗೆ ಹೆಚ್ಚು ಗಮನ ಕೊಡಬೇಕು. ಕಾನೂನು ಸುವ್ಯವಸ್ಥೆ ಬಗ್ಗೆ ಬಹಳಷ್ಟು ಕಾಳಜಿ ವಹಿಸಬೇಕು. ಇತ್ತೀಚೆಗೆ ರಸ್ತೆಗಳಲ್ಲಿಯೇ ಕೊಲೆಗಳು ನಡೆಯುತ್ತಿವೆ. ಇದರಿಂದ ಜನರಿಗೆ ಆತಂಕ ಎದುರಾಗಿದೆ. ಕೂಡಲೇ ಸರ್ಕಾರ ಇಂತಹ ಘಟನೆಗಳು ನಡೆಯದಂತೆ ಬಿಗಿ ಕ್ರಮ ಕೈಗೊಳ್ಳಬೇಕು. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲೆಡೆ ಜನರು ನೆಮ್ಮದಿಯಿಂದ ಬದುಕುವಂತಹ ವಾತಾವರಣ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net