

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾರೈಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅನಾರೋಗ್ಯದ ಕಾರಣ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬುಧವಾರ ಬೆಳಗಿನ ಜಾವ 3.40 ರ ಸುಮಾರು ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು, ಅವರನ್ನು ತಪಾಸಣೆಗೆ ಒಳಪಡಿಸಿ ಚಿಕಿತ್ಸೆ ನೀಡಲಾಗಿದ್ದು, ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.