ಎಚ್​.ಡಿ. ರೇವಣ್ಣಗೆ ಬಿಗ್ ರಿಲೀಫ್! ಜಾಮೀನು ನೀಡಿದ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ

WhatsApp Image 2024-05-20 at 3.02.19 PM
Published on

ಬೆಂಗಳೂರು: ಜೆಡಿಎಸ್ ಶಾಸಕ ಎಚ್​.ಡಿ. ರೇವಣ್ಣಗೆ ಇಂದು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣದಲ್ಲಿ ಸದ್ಯ ಮಾಜಿ ಶಾಸಕ ಎಚ್​.ಡಿ. ರೇವಣ್ಣಗೆ ಇದೀಗ ನ್ಯಾಯಾಲಯ ಜಾಮೀನು ನೀಡಿದ್ದು, 5 ಲಕ್ಷ ರೂ. ಬಾಂಡ್, ಒಬ್ಬರ ಶ್ಯೂರಿಟಿಯನ್ನು ಒದಗಿಸಬೇಕು ಎಂದು ಆದೇಶ ಹೊರಡಿಸಿದೆ.

ಇನ್ನು ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣಗೆ ರಾಜ್ಯಕ್ಕೆ ಬಂದು ತಪ್ಪು ನಡೆದಿದೆಯೋ, ಇಲ್ಲವೋ ಎಂಬುದನ್ನು ಸ್ಪಷ್ಟಪಡಿಸು, ಮುಂದಿನ 24-48 ಗಂಟೆಯೊಳಗೆ ಆಗಮಿಸಿ ಶರಣಾಗು ಎಂದು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net