

ಬೆಂಗಳೂರು: ಇಂದು ಎಚ್.ಡಿ. ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ರೇವಣ್ಣ ಪರ ಹಿರಿಯ ವಕೀಲ ನಾಗೇಶ್ ಅವರ ವಾದವನ್ನು ಆಲಿಸಿದ ಬಳಿಕ ಇದೀಗ ಸೋಮವಾರದವರೆಗೂ ಮಧ್ಯಂತರ ಜಾಮೀನು ಮುಂದುವರೆಯಲಿದೆ ಎಂದು ತಿಳಿಸಿ, ಮೇ.20ಕ್ಕೆ ಆದೇಶ ಕಾಯ್ದಿರಿಸಿದೆ.
ಇನ್ನು ಇದಕ್ಕೂ ಮೊದಲು ಜಾಮೀನು ಕೋರಿ ನ್ಯಾಯಾಲಯ ಮೆಟ್ಟಿಲೇರಿದ್ದ ಎಚ್.ಡಿ. ರೇವಣ್ಣಗೆ ಜಾಮೀನು ನೀಡದಂತೆ ಪ್ರಾಸಿಕ್ಯೂಷನ್ ಪರ ವಕೀಲರು ನ್ಯಾಯಾಧೀಶರಿಗೆ ಮನವಿ ಮಾಡಿದ್ದರು. ಕೆಲ ಸಮಯ ಇಬ್ಬರ ವಾದ ಆಲಿಸಿದ ನ್ಯಾಯಾಧೀಶರು, 5 ಲಕ್ಷ ರೂ. ಬಾಂಡ್ ನೀಡಬೇಕು ಮತ್ತು ಇದೇ ಮೊತ್ತಕ್ಕೆ ಇಬ್ಬರ ಭದ್ರತೆ ಒದಗಿಸಬೇಕು ಎಂಬ ಕಂಡಿಷನ್ ಮೇರೆಗೆ ರೇವಣ್ಣಗೆ ಮಧ್ಯಂತರ ಜಾಮೀನು ನೀಡಿ ಅರ್ಜಿ ವಿಚಾರಣೆಯನ್ನು ಮೇ 17ಕ್ಕೆ ಮುಂದೂಡಿತ್ತು.
ಇಂದು ಇದೇ ಜಾಮೀನು ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾಯಾಲಯ ರೇವಣ್ಣ ಪರ ವಕೀಲರಾದ ನಾಗೇಶ್ರ ವಾದ ಆಲಿಸಿದ ಬಳಿಕ ಇದೀಗ ಆದೇಶವನ್ನು ಮೇ.20ಕ್ಕೆ ಕಾಯ್ದಿರಿಸಿದೆ. ಇದು ಮಾಜಿ ಶಾಸಕರಿಗೆ ತಪ್ಪದ ಸಂಕಷ್ಟವಾಗಿದೆ.