ಲೈಂಗಿಕ ದೌರ್ಜನ್ಯ ಪ್ರಕರಣ: ಶಾಸಕ ಹೆಚ್​ಡಿ ರೇವಣ್ಣ ಬಂಧನ!

hdr
Published on

ಬೆಂಗಳೂರು: ಲೈಂಗಿಕ ದೌರ್ಜನ್ಯ ಕೇಸ್​ನಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಬೆನ್ನೆಲ್ಲೇ ಹೆಚ್​.ಡಿ. ರೇವಣ್ಣ ಅವರನ್ನು ವಿಶೇಷ ತನಿಖಾ ದಳದ ಅಧಿಕಾರಿಗಳು ಶನಿವಾರ ಸಂಜೆ ಬಂಧಿಸಿದರು.

ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರ ನಿವಾಸದಿಂದ ರೇವಣ್ಣ ಅವರನ್ನು ವಶಕ್ಕೆ ಪಡೆದ ಅಧಿಕಾರಿಗಳು ನೇರವಾಗಿ ಎಸ್​ಐಟಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.

ಒಂದು ಲೈಂಗಿಕ ದೌರ್ಜನ್ಯ ಕೇಸ್, ಮತ್ತೊಂದು ಕಿಡ್ನಾಪ್ ಆರೋಪ. ಹೀಗೆ ಎರಡು ಕೇಸ್‌ಗಳಿಂದ ರೇವಣ್ಣ ಇಕ್ಕಟ್ಟಿಗೆ ಸಿಲುಕಿದ್ದಾರೆ. ಯಾವುದೇ ಕ್ಷಣದಲ್ಲಿ ಬಂಧನವಾದ್ರೂ ಅಚ್ಚರಿ ಇಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net