ವಿವಿಗಳಿಗೆ ಕೇಂದ್ರದ ನೆರವು ಕೇಳಿದ ಎಚ್​ಡಿಡಿ

6-67d076f3748a7
Published on

ನವದೆಹಲಿ: ಕರ್ನಾಟಕದ ಹಲವು ವಿಶ್ವವಿದ್ಯಾಲಯಗಳು ಆರ್ಥಿಕ ಸಂಕಷ್ಟದಲ್ಲಿದ್ದು, ಕೇಂದ್ರ ಸರ್ಕಾರ ಆರ್ಥಿಕ ನೆರವು ಒದಗಿಸಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ರಾಜ್ಯಸಭೆಯಲ್ಲಿ ಧ್ವನಿ ಎತ್ತಿದ ದೇವೇಗೌಡರು, ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯವಾದ, 1916ರಲ್ಲಿ ಭಾರತದ ಆರನೇ ವಿಶ್ವವಿದ್ಯಾಲಯವಾಗಿ ಸ್ಥಾಪನೆಯಾಗಿದ್ದ ಮೈಸೂರು ವಿವಿ ಸಂಕಷ್ಟ ಎದುರಿಸುತ್ತಿದ್ದು, ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗೆ ವೇತನ ಪಾವತಿಸಲು ಹಣ ಇಲ್ಲದಂತಾಗಿದೆ. ಅಗಾಧ ಪ್ರಮಾಣದಲ್ಲಿ ಶೈಕ್ಷಣಿಕ ಸೇವೆ ಸಲ್ಲಿಸಿರುವ ಧಾರವಾಡ ವಿವಿಯೂ ಆರ್ಥಿಕ ಸಂಕಷ್ಟದಲ್ಲಿದೆ. ಮಂಜೂರಾಗಿರುವ ಬೋಧಕ ಹುದ್ದೆಗಳು ಖಾಲಿ ಉಳಿದಿವೆ ಮತ್ತು ಬೋಧಕರಿಗೆ ಸಮಯಕ್ಕೆ ಸರಿಯಾಗಿ ಸಂಬಳ ದೊರೆಯದಂತಾಗಿದೆ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net