ಜೆಡಿಎಸ್​ ಅಧಿಕಾರಕ್ಕೆ ಬಂದರೆ ಅಡುಗೆ ಅನಿಲದ ಮೇಲೆ ಶೇ.50ರಷ್ಟು ಸಬ್ಸಿಡಿ: ಎಚ್​.ಡಿ.ಕುಮಾರಸ್ವಾಮಿ ಘೋಷಣೆ

HDK
Published on

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಜೆಡಿಎಸ್​ ಪಕ್ಷ ಅಧಿಕಾರಕ್ಕೆ ಬಂದರೆ ಅಡುಗೆ ಅನಿಲದ ಸಿಲಿಂಡರ್​ಗಳ ಮೇಲೆ ಶೇ.50ರಷ್ಟು ಸಬ್ಸಿಡಿಯನ್ನು ನೀಡಲಾಗುವುದು ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.

ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಪಂಚರತ್ನ ರಥಯಾತ್ರೆ ಕಾರ್ಯಕ್ರಮವನ್ನ ಉದ್ದೇಶಿಸಿ ಮಾತನಾಡಿದ ಎಚ್​​.ಡಿ.ಕುಮಾರಸ್ವಾಮಿ ಕೇಂದ್ರ ಸರ್ಕಾರ ಉಚಿತ ಗ್ಯಾಸ್​ ಸಿಲಿಂಡರ್ಗಳನ್ನು ನೀಡಲಾಗುವುದು ಎಂದು ಹೇಳಿ ಉಜ್ವಲ ಯೋಜನೆಯನ್ನ ಜಾರಿಗೆ ತಂದಿದೆ. ಆದರೆ, ಇದನ್ನು ನಂಬಿದ ಮಹಿಳೆಯರಿಗೆ ಒಂದು ಸಿಲಿಂಡರ್ ಕೊಟ್ಟ ಮೇಲೆ ಸರ್ಕಾರ ಬೆಲೆ ಏರಿಕೆಯ ಶಾಕ್​ ನೀಡಿತ್ತು.

ಈಗ ಸಿಲಿಂಡರ್​ ಬೆಲೆ ಸಾವಿರ ರೂಪಾಯಿ ದಾಟಿದ್ದು ಬಡವರು ಜೀವನ ಸಾಗಿಸುವುದು ಕಷ್ಟಕರವಾಗಿದೆ. ನಮ್ಮಲ್ಲಿ ಅಡುಗೆ ಅನಿಲದ ಯೋಜನೆ ಹೊರತುಪಡಿಸಿ ಹಲವು ಯೋಜನೆಗಳಿವೆ. ಆಟೋ ಚಾಲಕರಿಗೆ ಮಾಸಿಕ ಎರಡು ಸಾವಿರ ರೂಪಾಯಿಯನ್ನು ನೀಡಲಾಗುವುದು. ಅಂಗನವಾಡಿ ಕಾರ್ಯಕರ್ತರ ಬೇಡಿಕೆಗಳನ್ನ ಈಡೇರಿಸಲಾಗುವುದು ಎಂದು ಪಂಚರತ್ನ ರಥಯಾತ್ರೆ ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡುವ ವೇಳೆ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net