

ಬೆಂಗಳೂರು: ಡಿನೋಟಿಫಿಕೇಷನ್ ಆರೋಪ ಪ್ರಕರಣ ಸಂಬಂಧ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಶನಿವಾರ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ವಿಚಾರಣೆಗೆ ಪದೇಪದೆ ಗೈರಾಗಿದ್ದ ಹಿನ್ನೆಲೆ ಎಚ್‌ಡಿಕೆ ವಿರುದ್ಧ ಕೋರ್ಟ್ ಅಸಮಧಾನ ವ್ಯಕ್ತಪಡಿಸಿತ್ತು. ಮುಂದಿನ ವಿಚಾರಣೆಗೆ ಕಡ್ಡಾಯ ಹಾಜರಾತಿಗೆ ಸೂಚಿಸಿತ್ತು. ಈ ಹಿನ್ನೆಲೆ ಶನಿವಾರ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಕುಮಾರಸ್ವಾಮಿ ತಮ್ಮ ವಕೀಲರೊಂದಿಗೆ ಹಾಜರಾಗಿ ವಿಚಾರಣೆ ಎದುರಿಸಿದರು.
ಬನಶಂಕರಿ 5ನೇ ಹಂತದ ಹಲಗೆವಡೇರಹಳ್ಳಿಯ 3 ಎಕರೆ 34 ಗುಂಟೆ ಜಮೀನು ಡಿನೋಟಿಫಿಕೇಶನ್ ಮಾಡಿದ ಆರೋಪ ಸಂಬಂಧ ಕುಮಾರಸ್ವಾಮಿ ವಿರುದ್ಧ ಚಾಮರಾಜನಗರದ ಮಹಾದೇವಸ್ವಾಮಿ ದೂರು ಸಲ್ಲಿಸಿದ್ದರು. ಈ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ಕೈಗೊಂಡಿದೆ.