ಎಚ್​​ಡಿಕೆಗೆ ಹಾಲು ಒಕ್ಕೂಟ ವ್ಯವಸ್ಥೆ ಬಗ್ಗೆ ಗೊತ್ತಿಲ್ಲ; DK ಶಿವಕುಮಾರ್ ಕಿಡಿ

dk - 2025-03-28T154423.854
Published on

"ಕುಮಾರಸ್ವಾಮಿ ಅವರು ಏನಾದರೂ ಟೀಕೆ ಮಾಡಲಿ. ರೈತರು ಬದುಕಬೇಕಲ್ಲವೇ? ಅವರಿಗೆ ಕಾಳಜಿ ಇದ್ದರೆ, ಹಸುಗಳ ಮೇವಿನ ಬೆಲೆ ಕಡಿಮೆ ಮಾಡಿಸಲಿ. ಜಿಎಸ್ ಟಿ, ಇಂಧನ ತೈಲ ಬೆಲೆ ಕಡಿಮೆ ಮಾಡಿಸಲಿ" ಎಂದು ಡಿಸಿಎಂ DK ಶಿವಕುಮಾರ್ ತಿರುಗೇಟು ನೀಡಿದರು.

ದೆಹಲಿಯಲ್ಲಿ ನಡೆಯುತ್ತಿರುವ ಜಿಲ್ಲಾ ಅಧ್ಯಕ್ಷರುಗಳ ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. ಹಾಲಿನ ದರ ಏರಿಕೆ ಹೆಚ್ಚಳ ವಿರೋಧಿಸಿ, ಇದು ಈಸ್ಟ್ ಇಂಡಿಯಾ ಸರ್ಕಾರ ಎಂಬ ಕುಮಾರಸ್ವಾಮಿ ಟೀಕೆ ಬಗ್ಗೆ ಕೇಳಿದಾಗ ಡಿಕೆಶಿ ಉತ್ತರಿಸಿದ ಪರಿ.

ದರ ಹೆಚ್ಚಳದ ಹಣ ರೈತರಿಗೆ ಹೋಗುವುದಿಲ್ಲ, ಸರ್ಕಾರಕ್ಕೆ ಹೋಗಲಿದೆ ಎಂಬ ಕುಮಾರಸ್ವಾಮಿ ಟೀಕಿ ಬಗ್ಗೆ ಕೇಳಿದಾಗ, "ಸರ್ಕಾರಕ್ಕೆ ಹೇಗೆ ಹೋಗುತ್ತದೆ. ಹಾಗಿದ್ದರೆ ಕುಮಾರಸ್ವಾಮಿ ಅವರಿಗೆ ಹಾಲು ಒಕ್ಕೂಟದ ವ್ಯವಸ್ಥೆ ಬಗ್ಗೆ ಗೊತ್ತೇ ಇಲ್ಲ. ಈ ಬಗ್ಗೆ ಕುಮಾರಸ್ವಾಮಿ ಅವರು ತಮ್ಮ ಸಹೋದರನ ಬಳಿ ಮಾಹಿತಿ ಪಡೆಯಲಿ" ಎಂದು ಹರಿಹಾಯ್ದರು.

ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಸಂಬಂಧಿಸಿದಂತೆ ಪ್ರಿಯಾಂಕಾ ಗಾಂಧಿ ಅವರು ಪತ್ರ ಬರೆದಿರುವ ಬಗ್ಗೆ ಕೇಳಿದಾಗ, "ನಾವು ಈ ಪತ್ರ ನೋಡುತ್ತೇವೆ, ಪರಿಶೀಲನೆ ಮಾಡಿ, ಚರ್ಚಿಸುತ್ತೇವೆ. ಆನಂತರ ತೀರ್ಮಾನ ಮಾಡುತ್ತೇವೆ" ಎಂದು ತಿಳಿಸಿದರು. ಬಿಜೆಪಿಯಲ್ಲಿನ ಬೆಳವಣಿಗೆ ಬಗ್ಗೆ ಕೇಳಿದಾಗ, ಅವರ ಪಕ್ಷದವರು ಯಾರು ಏನಾದರೂ ಮಾಡಿಕೊಳ್ಳಲಿ. ಅದರ ಬಗ್ಗೆ ಮಾತನಾಡಿ ನಾನು ಏಕೆ ಅವರ ಪಕ್ಷದ ವಕ್ತಾರನಾಗಲಿ ಎಂದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net