

ಮಂಡ್ಯ: ಇಂದು ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಮಾಜಿ ಸಿಎಂ ಎಚ್.ಡಿ, ಕುಮಾರಸ್ವಾಮಿಗೆ ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ, ನಿಖಿಲ್ ಕುಮಾರಸ್ವಾಮಿ, ಯದುವೀರ್ ಹಾಗೂ ಗೋವಾ ಸಿಎಂ ಪ್ರಮೋದ್ ಸಾವಂತ್ ಸಾಥ್ ನೀಡಿದರು.
ಡಿಸಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲು ಮುಂದಾದ ಎಚ್ಡಿಕೆಗೆ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಅನ್ನದಾನಿ ಕೂಡ ಸಾಥ್ ನೀಡಿದರು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಡಿಸಿ ಕಚೇರಿಗೆ ಆಗಮಿಸುತ್ತಿದ್ದಂತೆ ಕಾಲಿಗೆ ಬಿದ್ದ ನಿಖಿಲ್ ಕುಮಾರಸ್ವಾಮಿ ಅವರ ಆರ್ಶಿವಾದ ಪಡೆದರು. ಯಡಿಯೂರಪ್ಪ ಜತೆಗೆ ಮಾಜಿ ಸಚಿವ ನಾರಾಯಣಗೌಡ ಕೂಡ ಆಗಮಿಸಿದರು.