ಎಚ್ಡಿಕೆ ಮನೆಗೆ ಅಕ್ರಮ ವಿದ್ಯುತ್ ಸಂಪರ್ಕ; 68 ಸಾವಿರ ರೂ ದಂಡ

hdk
Published on

ಬೆಂಗಳೂರು:
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಜೆಪಿ ನಗರದ ವಾಸದ ಮನೆಗೆ ದಿಪಾವಳಿ ಸಂದರ್ಭದಲ್ಲಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪ್ರಕರಣದಲ್ಲಿ ಬೆಸ್ಕಾಂ 68 ಸಾವಿರ ರೂ ದಂಡ ವಿಧಿಸಿದೆ.
ಅಕ್ರಮ ವಿದ್ಯುತ್ ಸಂಪರ್ಕ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರ ಮನೆಯನ್ನು ಪರಿಶೀಲನೆ ಮಾಡಿ ಎ್ಐಆರ್ ದಾಖಲು ಮಾಡಲಾಗಿತ್ತು.
ಶೀಘ್ರವೇ ದಂಡವನ್ನು ಪಾವತಿ ಮಾಡುವುದಾಗಿ ಬೆಸ್ಕಾಂ ಅಧಿಕಾರಿಗಳಿಗೆ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net