

ಬೆಂಗಳೂರು: "ಕೇಂದ್ರ, ರಾಜ್ಯ ಸರಕಾರಗಳು ಬೆಲೆ ಏರಿಕೆಯನ್ನೇ ಅಧಿಕೃತ ವ್ಯವಹಾರ ಮಾಡಿಕೊಂಡಿವೆ. ಇನ್ನೂ ರಾಜ್ಯದ ಕಾಂಗ್ರೆಸ್(Congress) ಸರಕಾರ ಗ್ಯಾರಂಟಿಗಳೆಂಬ ತುಪ್ಪ ಸವರಿ, ಅದೇ ಗ್ಯಾರಂಟಿಗಳ ಇಲಾಖೆಗಳ ಮೂಲಕವೇ ಜನರ ಮೇಲೆ ಮಣಭಾರ ಹೇರುತ್ತಿದೆ. ಒಂದು ಕೈಯ್ಯಲ್ಲಿ ಕೊಟ್ಟು ಎರಡು ಕೈಗಳಲ್ಲಿ ಬರೆ ಎಳೆಯುತ್ತಿದೆ" ಎಂದು ಎಚ್ಡಿಕೆ ಟ್ವೀಟ್ನಲ್ಲಿ(Tweet) ಹೇಳಿದ್ದಾರೆ.
"ಹೆದ್ದಾರಿ ಪ್ರಾಧಿಕಾರವು ಹೆಚ್ಚಳ ಮಾಡಿರುವ ಟೋಲ್ ದರವನ್ನು ಕೂಡಲೇ ಹಿಂಪಡೆಯಬೇಕು. ಹೆದ್ದಾರಿ(Highway) ಪ್ರಾಧಿಕಾರದ ಮೇಲೆ ರಾಜ್ಯ ಸರಕಾರ ಒತ್ತಡ ಹಾಕಬೇಕು. ಬೆಲೆ ಬರೆ ಬವಣೆಯಿಂದ ಬಸವಳಿದಿರುವ ಜನರು ರೊಚ್ಚಿಗೇಳುವ ಮುನ್ನ ಟೋಲ್ ದರ ಇಳಿಯಬೇಕು" ಎಂದು ಹೇಳಿದ್ದಾರೆ.
"ಪ್ರತಿಪಕ್ಷವಾಗಿದ್ದಾಗ ಬೆಲೆ ಏರಿಕೆ ವಿರುದ್ಧ, ಆಡಳಿತ ಪಕ್ಷವಾದ ಮೇಲೆ ಬೆಲೆ ಏರಿಕೆ ಪರ ಇದ್ದರೆ ಜನರು ತಕ್ಕಪಾಠ ಕಲಿಸುತ್ತಾರೆ. ಊಸರವಳ್ಳಿ ವೈಖರಿ ಸಂಶಯಕ್ಕೆ ದಾರಿ. ಹಿಂದಿನ ಬಿಜೆಪಿ ಸರಕಾರದ ದಾರಿಯಲ್ಲಿಯೇ ಈ ಸರಕಾರವೂ ನಡೆಯುತ್ತಿದೆಯಾ? ಎನ್ನುವ ಅನುಮಾನ ಆರಂಭದಲ್ಲಿಯೇ ಬರುತ್ತಿದೆ" ಎಂದು ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಮತ್ತು ಬಿಜೆಪಿ(BJP) ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.