ಹೆಸರಿಗೆ ಅನ್ನದಾತ…. ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಚ್​ಡಿಕೆ ಗರಂ

WhatsApp Image 2024-05-16 at 3.30.58 PM
Published on

ಬೆಂಗಳೂರು: ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ. ಹೆಸರಿಗೆ ಅನ್ನದಾತ.. ಆದರೆ, ಅವರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಕಾಂಗ್ರೆಸ್​ ಸರ್ಕಾರವೇ ಕೈಕಟ್ಟಿ ಕೂತಿದೆ ಎಂದು ಆರೋಪಿಸಿದ್ದಾರೆ.

ಕೇಂದ್ರ ಸರಕಾರದಿಂದ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದ್ದ ಬರ ಪರಿಹಾರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕ್​ಗಳ ವರ್ತನೆ ನಿಜಕ್ಕೂ ಕ್ರೂರಾತಿ ಕ್ರೂರ ಹಾಗೂ ಖಂಡನೀಯ. ಮೊದಲೇ ತೀವ್ರ ಬರ, ಬೆಳೆನಾಶದಿಂದ ಕಂಗೆಟ್ಟಿರುವ ರೈತರ ಕಣ್ಣಲ್ಲಿ ರಕ್ತ ಕಣ್ಣೀರು ತರಿಸುವ ಅಮಾನವೀಯ ಕ್ರಮ ಇದು ಎಂದರೆ ತಪ್ಪಲ್ಲ ಎಂದಿದ್ದಾರೆ.

ರಾಜ್ಯ ಸರಕಾರ ಕೂಡಲೇ ಸಾಲ ನೀಡಿರುವ ಎಲ್ಲಾ ಬ್ಯಾಂಕ್​ಗಳ ಮುಖ್ಯಸ್ಥರ ಸಭೆ ಕರೆದು, ಈ ಬಗ್ಗೆ ಗಂಭೀರವಾಗಿ ಚರ್ಚೆ ನಡೆಸಬೇಕು. ಬರ ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡಬಾರದು ಎಂದು ತಾಕೀತು ಮಾಡಬೇಕು ಎನ್ನುವುದು ನನ್ನ ಆಗ್ರಹ ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net