

ಬೆಂಗಳೂರು: ರಾಜ್ಯದ ಜನರು ಬಹಳಷ್ಟು ನಿರೀಕ್ಷೆಯಿಟ್ಟುಕೊಂಡಿದ್ದು, ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾದ ನಂತರ ರಾಜ್ಯಕ್ಕೆ ಏನಾದರೂ ಅನುಕೂಲ, ಪ್ರಯೋಜನ ಆಗಿದೆಯೆ ? ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಪ್ರಶ್ನಿಸಿದರು.
ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ರಾಜ್ಯ ಸರ್ಕಾರವನ್ನು ಬೀಳಿಸಲು ಹೊರಟಿರುವವರಿಗೆ ರಾಜ್ಯದ ಅಭಿವೃದ್ಧಿ ಬಗ್ಗೆ ಎಷ್ಟೆಲ್ಲ ಕಾಳಜಿವಹಿಸಿದ್ದಾರೆ ಎಂದು ಜನರು ಗಮನಿಸುತ್ತಾರೆ ಎಂದರು.
ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಸಚಿವರು ರಾಜ್ಯಕ್ಕೆ ಯಾವ್ಯಾವ ಕೊಡುಗೆ ನೀಡಿದ್ದಾರೆ, ಅದಕ್ಕಾಗಿ ಶ್ರಮಿಸುತ್ತಿದ್ದಾರೆ ಎನ್ನುವುದನ್ನೂ ಜನರಿಗೆ ತಿಳಿಸಬೇಕು ಎಂದು ಕೃಷ್ಣಬೈರೇಗೌಡ ಒತ್ತಾಯಿಸಿದರು.
ರಾಜ್ಯದ ಪ್ರಮುಖ, ಮಹತ್ವಾಕಾಂಕ್ಷಿ ಯೋಜನೆಗಳ ಪ್ರಸ್ತಾವನೆಗಳಿಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ. ಇದೇ ಕಾರಣಕ್ಕೆ ಭದ್ರಾ ಮೇಲ್ದಂಡೆ ಯೋಜನೆ, ಮೇಕೆದಾಟು ಮತ್ತು ಕಳಸಾ-ಬಂಡೂರಿ ನಾಲಾ ಯೋಜನೆ ನನೆಗುದಿಗೆ ಬಿದ್ದಿವೆ ಎಂದು ಟೀಕಿಸಿದರು.
ಕೇಂದ್ರ ಪರಿಸರ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ವನ್ಯಜೀವಿ ಮಂಡಳಿ ರಾಜ್ಯದ ಅರಣ್ಯ ಪ್ರದೇಶ ಹಾದುಹೋಗುವ ಗೋವಾದ ಹೈಟೆನ್ಷನ್ ವಿದ್ಯುತ್ ಮಾರ್ಗಕ್ಕೆ ಅನುಮತಿ ನೀಡುತ್ತದೆ. ಆದರೆ ಇಲ್ಲದ ನೆಪವೊಡ್ಡಿ ಕಳಸಾ-ಬಂಡೂರಿ ನಾಲಾ ಯೋಜನೆ ಪ್ರಸ್ತಾವನೆ ಬದಿಗಿಡುತ್ತದೆ. ಕೇಂದ್ರ ಸಚಿವರು ಈ ನಿಟ್ಟಿನಲ್ಲಿ ಮಾಡುತ್ತಿರುವುದೇನೋ ? ಎಂದು ಕೃಷ್ಣಬೈರೇಗೌಡ ಕೇಳಿದರು.
ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ವಿಶೇಷ ಅನುದಾನವನ್ನು ಕಳೆದ ಬಜೆಟ್‌ನಲ್ಲಿ ಕೇಂದ್ರ ಸಚಿವರು ಪ್ರಕಟಿಸಿದ್ದರು. ಆದರೆ ಈವರೆಗೂ ಅನುದಾನ ಬಿಡುಗಡೆ ಮಾಡದೆ ಆಡಳಿತಾತ್ಮಕ, ತಾಂತ್ರಿಕ ವಿವರಣೆಗಳನ್ನು ಕೇಳುತ್ತಾ ಕಾಲ ಕಳೆಯುತ್ತಿದೆ ಎಂದು ಆಕ್ಷೇಪಿಸಿದರು.
ಕಾಂಗ್ರೆಸ್ ಸರ್ಕಾರ ಉರುಳಿದರೆ ಎಚ್.ಡಿ.ಕುಮಾರಸ್ವಾಮಿಯವರಿಗೆ ರಾಜಕೀಯ ಲಾಭವಾದೀತು. ಆದರೆ ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಸರಿಪಡಿಸಿ ನ್ಯಾಯ ಕೊಡಿಸುವಲ್ಲಿ ವಿಲರಾಗಿ ರಾಜ್ಯದ ಜನರ ಮೇಲೆ ತೀರಿಸಿಕೊಳ್ಳಲು ಮುಂದಾದಂತಿದೆ ಎಂದು ಟೀಕಿಸಿದರು.
ಜೆಡಿಎಸ್‌ನ ಪದಾಧಿಕಾರಿಯೊಬ್ಬರು ನೀಡಿದ ದೂರಿನ ಮೇರೆಗೆ ಎ್ಐಆರ್ ದಾಖಲಾಗಿದೆ. ಈ ಸತ್ಯ ಗೊತ್ತಿದ್ದೂ ಎಚ್‌ಡಿಕೆ ಕಾಂಗ್ರೆಸ್ ಮೇಲೆ ಆರೋಪ ಮಾಡುತ್ತಿದ್ದಾರೆ. ರಾಜಕೀಯ ಕಾರಣಕ್ಕೆ ಹೀಗೆ ಆರೋಪಿಸುವುದರಿಂದ ಸತ್ಯ ಮರೆಮಾಚಲಾಗದು. ತನಿಖೆಯಾಗಲಿ, ಸತ್ಯವೇನೆಂದು ಗೊತ್ತಾಗುತ್ತದೆ ಎಂದು ಕೃಷ್ಣಬೈರೇಗೌಡ ಹೇಳಿದರು.