ಕೆ.ಜಿ.ಹಳ್ಳಿ ಠಾಣೆಯ ಮುಖ್ಯ ಪೇದೆ ನೇಣು ಬಿಗಿದು ಆತ್ಮಹತ್ಯೆ; ನಿಖರ ಕಾರಣ ನಿಗೂಢ

Head Constable
Published on

ಬೆಂಗಳೂರು: ಕೆ.ಜಿ.ಹಳ್ಳಿ ಠಾಣೆಯ ಹೆಡ್ ಕಾನ್ಸ್‌ಟೆಬಲ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರವೀಂದ್ರ ಮೃತ ಪೇದೆ.

ಕಳೆದ ನಾಲ್ಕೈದು ವರ್ಷಗಳಿಂದ ಕೆ.ಜಿ.ಹಳ್ಳಿ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು. ಮದುವೆಯಾಗಿ ಒಂದು ಮಗು ಇದೆ. ಇಂದು ಹೆಗ್ಡೆನಗರದ ರೈಲ್ವೆ ಟ್ರ್ಯಾಕ್​ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ. ಕೌಟುಂಬಿಕ ಕಲಹ ಇರಬಹುದು ಎಂದು ಅಂದಾಜಿಸಲಾಗಿದೆ. ಕೆ.ಜಿ.ಹಳ್ಳಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net