ಚಪ್ಪರದಹಳ್ಳಿಯಲ್ಲಿ ಆರೋಗ್ಯ ತಪಾಸಣೆ ಶಿಬಿರ

ಚಪ್ಪರದಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಶುಕ್ರವಾರ  ಹಮ್ಮಿಕೊಂಡಿದ್ದ ತಪಾಸಣೆ ಶಿಬಿರದಲ್ಲಿ ಆರೋಗ್ಯ ನಿರೀಕ್ಷಕ ಎಚ್.ಎಸ್. ರವಿ,  ಆಪ್ತ ಸಮಾಲೋಚಕರಾದ ರೇಖಾ, ಪ್ರಕಾಶ್ ಇತರರು ಇದ್ದರು.
ಚಪ್ಪರದಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ತಪಾಸಣೆ ಶಿಬಿರದಲ್ಲಿ ಆರೋಗ್ಯ ನಿರೀಕ್ಷಕ ಎಚ್.ಎಸ್. ರವಿ, ಆಪ್ತ ಸಮಾಲೋಚಕರಾದ ರೇಖಾ, ಪ್ರಕಾಶ್ ಇತರರು ಇದ್ದರು.
Published on
ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಚಪ್ಪರದಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ಶುಕ್ರವಾರ ಅಸಾಂಕ್ರಾಮಿಕ ರೋಗಗಳ ತಪಾಸಣೆ ಮತ್ತು ಎಚ್‌ಐವಿ ಏಡ್ಸ್ ಅರಿವು ಶಿಬಿರವನ್ನು ಆಯೋಜಿಸಲಾಗಿತ್ತು.
ಶಿಬಿರ ಉದ್ಘಾಟಿಸಿ ಮಾತನಾಡಿದ ಸಮಗ್ರ ಆಪ್ತ ಸಮಾಲೋಚನೆ ಮತ್ತು ಪರೀಕ್ಷಾ ಕೇಂದ್ರದ ಸಮಾಲೋಚಕ
ಪ್ರಕಾಶ್, ಎಚ್‌ಐವಿ ಸೋಂಕಿನ ಬಗ್ಗೆ ಅನಗತ್ಯ ಭಯ ಬೇಡ ಎಂದರು. ಸುರಕ್ಷಿತ ಜೀವನಶೈಲಿ, ಸಮಯಕ್ಕೆ ಸರಿಯಾದ ತಪಾಸಣೆ ಹಾಗೂ ಜಾಗೃತಿಯಿಂದ ಸೋಂಕನ್ನು ತಡೆ ಗಟ್ಟಬಹುದು. ಆರೋಗ್ಯದಲ್ಲಿ ಯಾವುದೇ ಅನುಮಾನ ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಪರೀಕ್ಷೆ ಮಾಡಿಸಿಕೊಳ್ಳುವುದು ಅಗತ್ಯ ಎಂದು ತಿಳಿಸಿದರು.
ಶಿಬಿರದಲ್ಲಿ ಒಟ್ಟು 95 ಮಂದಿಗೆ ಎಚ್‌ಐವಿ ಹಾಗೂ ಸಿಫಿಲಿಸ್ ರೋಗದ ತಪಾಸಣೆ ನಡೆಸಲಾಗಿಯಿತು. ಯಾವುದೇ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಅವರು ತಿಳಿಸಿದರು. ಅಸಾಂಕ್ರಾಮಿಕ ರೋಗಗಳ ತಪಾಸಣೆಯಲ್ಲಿ 22 ಸಂಶಯಾಸ್ಪದ ಪ್ರಕರಣಗಳು ಪತ್ತೆಯಾಗಿವೆ. ಅವರನ್ನು ಹೆಚ್ಚಿನ ಚಿಕಿತ್ಸೆ ಹಾಗೂ ಪರೀಕ್ಷೆಗಾಗಿ ಚಪ್ಪರದಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರೆಫರ್ ಮಾಡಲಾಗಿದೆ ಎಂದರು.
ಆರೋಗ್ಯ ನಿರೀಕ್ಷಕ ಎಚ್.ಎಸ್. ರವಿ ಮಾತನಾಡಿ, ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆಗಳಂತಹ ಅಸಾಂಕ್ರಾಮಿಕ ರೋಗಗಳನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿದರೆ ಪರಿಣಾಮಕಾರಿ ಚಿಕಿತ್ಸೆ ಸಾಧ್ಯವಾಗುತ್ತದೆ. ಸಾರ್ವಜನಿಕರು ಆರೋಗ್ಯ ತಪಾಸಣಾ ಉಚಿತ ಶಿಬಿರಗಳ ಸದುಪಯೋಗ ಪಡೆದು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕು ಎಂದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ಕೆ. ಶ್ರೀದೇವಿ, ಆಪ್ತ ಸಮಾಲೋಚಕಿ ರೇಖಾ, ಸಿಬ್ಬಂದಿ ಹೇಮಾ, ರೇಖಾ, ಮಹೇಂದ್ರ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net